ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಸಂಸ್ಕೃತಿ: ಗದಗದಲ್ಲಿ ಕಾಂಗ್ರೆಸ್​ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ | Corruption is Congress Party Culture: Minister Shriramulu against Congress in Gadag


ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಸಂಸ್ಕೃತಿ: ಗದಗದಲ್ಲಿ ಕಾಂಗ್ರೆಸ್​ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ

ಸಾರಿಗೆ ಸಚಿವ ಬಿ. ಶ್ರೀರಾಮುಲು

ಅಗ್ನಿಪಥ ಯೋಜನೆ ಜಾರಿಯಿಂದ ಕಾಂಗ್ರೆಸ್​ಗೆ ಉರಿ ಉರಿಯುಂಟಾಗಿದೆ. ಅಗ್ನಿಪಥ ಹೋರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ಆರೋಪ ಮಾಡಿದರು.

ಗದಗ: 40% ಕಮೀಷನ್​ನಲ್ಲಿ‌ ಪ್ರಧಾನಿ ನರೇಂದ್ರ ಮೋದಿಗೂ ಪಾಲು ಎಂದು ಕಾಂಗ್ರೆಸ್ (Congress) ಈ ಹಿಂದು ಆರೋಪಿಸಿದ್ದು, ಈ ಕುರಿತಾಗಿ ನಗರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಭ್ರಷ್ಟಾಚಾರದ ದೊಡ್ಡ ಪಿತಾಮಹ ಅಂದರೆ ಅದು ಕಾಂಗ್ರೆಸ್ ಪಕ್ಷ. ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಎಂದು ಕಾಂಗ್ರೆಸ್​ಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡು ಈ ರೀತಿ ಆರೋಪ‌ಮಾಡುತ್ತಿದೆ. ಬಿಜೆಪಿ ಸರ್ಕಾರ ಸಂಪೂರ್ಣ ಪಾರದರ್ಶಕ ಆಡಳಿತ ನೀಡುತ್ತಿದೆ. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಲಾಭಕ್ಕೆ ಆಗಮನ ಕಾಂಗ್ರೆಸ್ ಆರೋಪ ವಿಚಾರಕ್ಕೆ, ರಾಜ್ಯದಲ್ಲಿ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗುವುದು ಅದು ರಾಜ್ಯಕ್ಕೆ ಶಕ್ತಿ. ಇಂಥ ವಿಚಾರದಲ್ಲಿ ಕಾಂಗ್ರೆಸ್ ಈ ರೀತಿಯ ಟೀಕೆ ಮಾಡುವ ಕೆಲಸ ನೋಡಿ ನೈತಿಕ ದಿವಾಳಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಶ್ರೀ ರಾಮುಲು ವಾಗ್ದಾಳಿ ಮಾಡಿದರು.

TV9 Kannada


Leave a Reply

Your email address will not be published.