ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನು


ಮಂಗಳೂರು: ಮೀನುಗಾರರ ಬಲೆಗೆ ಅಪರೂಪದ ಹಾರುವ ಮೀನು ಬಿದ್ದಿದೆ. ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನುಗಳೂ ಸಿಕ್ಕಿವೆ.

ಆಂಗ್ಲ ಭಾಷೆಯಲ್ಲಿ ಫ್ಲೈಯಿಂಗ್‌ ಫಿಶ್‌ ಹಾಗೂ ತುಳುವಲ್ಲಿ ಪಕ್ಕಿಮೀನ್‌ ಎಂದು ಕರೆಯಲ್ಪಡುವ ಈ ಮೀನು ಹೆಚ್ಚಾಗಿ ಆಳಸಮುದ್ರದಲ್ಲಿರುವಂಥ ಮತ್ಸ್ಯ ಪ್ರಭೇದ. ಇವುಗಳಿಗೆ ಹಕ್ಕಿಯಂತೆಯೇ ರೆಕ್ಕೆಗಳಿರುತ್ತವೆ. ರೆಕ್ಕೆ ಹಾಗೂ ದೇಹದ ಎಲುಬುಗಳ ಭಿನ್ನ ರಚನೆಯಿಂದ ನೀರಿನಿಂದ ಮೇಲೆ ಎಗರಿ ಕೆಲ ಹೊತ್ತು ಹಕ್ಕಿಗಳಂತೆಯೇ ಹಾರುವ ಸಾಮರ್ಥ್ಯ ಹೊಂದಿವೆ. ಸುಮಾರು 15ರಿಂದ 45 ಸೆಂ.ಮೀ ವರೆಗೆ ಉದ್ದವಾಗುವ ಈ ಮೀನುಗಳು ಬಲೆಗೆ ಬೀಳುವುದು ಬಲು ಅಪರೂಪ ಅಂತ ಮೀನುಗಾರರು ಹೇಳಿದ್ದಾರೆ.

News First Live Kannada


Leave a Reply

Your email address will not be published. Required fields are marked *