ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯೆಯೋರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಕೇರಳದ ತಲಶೇರಿ ಮೂಲದ ಡಾ.ಮಾಹಾಬಷೀರಾ ಕೊರೊನಾಗೆ ಬಲಿಯಾದ ದುರ್ದೈವಿ.

ಕಳೆದ 8 ತಿಂಗಳ ಹಿಂದೆ ಮಂಗಳೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಶವಾಫೆರ್ ಮಹಮ್ಮದ್ ಅವರನ್ನು ಮದುವೆಯಾಗಿದ್ದ ಡಾ. ಮಹಾಬಷೀರಾ 6 ತಿಂಗಳ ಗರ್ಭಿಣಿಯಾಗಿದ್ದರು.

ಕಳೆದ ಕೆಲ ದಿನಗಳ ಹಿಂದೆ ದಂಪತಿ ಇಬ್ಬರಿಗೂ ಕೊರೊನಾ ಪಾಸಿಟಿವ್ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮಹಾಬಷೀರಾಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ.

The post ಮಂಗಳೂರಿನ ಯವ ವೈದ್ಯೆ ಕೊರೊನಾ ಮಹಾಮಾರಿಗೆ ಬಲಿ appeared first on Public TV.

Source: publictv.in

Source link