ಮಂಗಳೂರಿನ ಸುರತ್ಕಲ್‌ನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ; ಬೈಕ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಯುವಕರಿಂದ ಥಳಿತ | Moral policing in surathkal near mangalore 6 youths arrested


ಮಂಗಳೂರಿನ ಸುರತ್ಕಲ್‌ನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ; ಬೈಕ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಯುವಕರಿಂದ ಥಳಿತ

ಸಾಂಕೇತಿಕ ಚಿತ್ರ

ದಕ್ಷಿಣ ಕನ್ನಡ: ಅನ್ಯ ಧರ್ಮದ ಯುವತಿಯ ಜೊತೆ ಹೋಗುತ್ತಿದ್ದ ಹಿನ್ನೆಲೆ, ಬೈಕ್ ಹಿಂಬಾಲಿಸಿ ಯುವಕನಿಗೆ ಥಳಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್​ನ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್ಮೆಂಟ್ ಬಳಿ ನಡೆದಿದೆ. ನೈತಿಕ ಪೊಲೀಸ್‌ಗಿರಿ (Moral policing) ಹೆಸರಿನಲ್ಲಿ ಯುವಕರ ತಂಡ ಈ ಕೃತ್ಯ ಎಸಗಿದ್ದಾರೆ. ಅನ್ಯ ಧರ್ಮದವರ ಜೊತೆ ಓಡಾಡದಂತೆ ಯುವತಿಗೆ ಧಮ್ಕಿ ಹಾಕಿದ್ದಾರೆ. ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಮೇಲೆ ನೈತಿಕ ಪೊಲೀಸ್​ಗಿರಿ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾರೆ.

ಯುವತಿ ಅಪಾರ್ಟ್‌ಮೆಂಟ್ ಖಾಲಿ ಮಾಡುತ್ತಿದ್ದ ಹಿನ್ನೆಲೆ ಲಗೇಜ್ ಶಿಫ್ಟ್ ಮಾಡಿ, ಯುವತಿಯನ್ನು ಕರೆದೊಯ್ಯುತ್ತಿದ್ದ ಯುವಕನನ್ನು ಹಿಂಬಾಲಿಸಿ ಬಂದ ಯುವಕರ ತಂಡ ಹಲ್ಲೆ ನಡೆಸಿದೆ. ಸದ್ಯ ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿಗಳ ಅರೆಸ್ಟ್
ಅನ್ಯ ಧರ್ಮಿಯ ಯುವಕನ ಜೊತೆ ಓಡಾಡುತ್ತೀಯ ಎಂದು ಕೇರಳ ಮೂಲದ ಯುವಕ ಮಹಮ್ಮದ್ ಯಾಸಿನ್ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಯುವತಿಗೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಧಮಕಿ ಹಾಕಲಾಗಿತ್ತು. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಪೊಲೀಸರಿಂದ ಕ್ಷಿಪ್ರ ಕಾರ್ಯಾಚರಣೆ ನಡೆದಿದ್ದು, ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

fir copy

ಎಫ್​ಐಆರ್​ ಪ್ರತಿ

ಇದನ್ನೂ ಓದಿ:
ಬೆಳಗಾವಿ: ನೈತಿಕ ಪೊಲೀಸ್‌ಗಿರಿ ಪ್ರಕರಣ; ಅನ್ಯಕೋಮಿನ ಸ್ನೇಹಿತೆಯರ ಜತೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆಗೆ ಯತ್ನ

Moral policing: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸರ ಅಟ್ಟಹಾಸ; ರಾತ್ರಿ 10 ಗಂಟೆಯಲ್ಲಿ ಕಾಲೇಜು ಬಳಿ ಘಟನೆ

TV9 Kannada


Leave a Reply

Your email address will not be published.