ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ | Flight that was ready for take off was stopped because of WhatsApp chatting in Mangalore


ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣ

ದಕ್ಷಿಣ ಕನ್ನಡ: ಮಂಗಳೂರು ಏರ್ ಪೋರ್ಟ್​ನಲ್ಲಿ ಯುವಕ-ಯುವತಿ ಚಾಟಿಂಗ್ ಮಾಡಿದಕ್ಕೆ ರನ್ ವೇನಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೌದು ಮಂಗಳೂರು ಏರ್ ಪೋರ್ಟ್​​ನಲ್ಲಿ ಯುವಕ-ಯುವತಿ ಭದ್ರತೆ ಬಗ್ಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ವಾಟ್ಸಾಪ್ ಚಾಟ್ ಮಾಡಿದ್ದಕ್ಕೆ ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತಗೊಂಡಿದೆ.

ಯುವತಿ ಮಂಗಳೂರು ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ತೆರಳಲು ಬಂದಿದ್ದಳು. ಯುವಕ ಮಂಗಳೂರು ಏರ್ ಪೋರ್ಟ್ ಮೂಲಕ ಮುಂಬೈಗೆ ತೆರಳಲು ಬಂದಿದ್ದನು. ಇಬ್ಬರೂ ಪರಿಚಯಸ್ಥರೇ ಆಗಿದ್ದು, ಬೇರೆ ಬೇರೆ ವಿಮಾನದಲ್ಲಿ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು.

ಯುವಕ ಕೂತಿದ್ದ ಮುಂಬೈ ವಿಮಾನ ರನ್ ವೇಯಲ್ಲಿ ಟೇಕಾಫ್​ಗೆ ಸಿದ್ದವಾಗಿದ್ದವಾಗಿತ್ತು. ಈ ವೇಳೆ ಬೆಂಗಳೂರಿಗೆ ತೆರಳಲು ಏರ್ ಪೋರ್ಟ್ ನಲ್ಲಿ ಕೂತಿದ್ದ ಯುವತಿ ಜೊತೆ ಚಾಟಿಂಗ್ ಮಾಡುತ್ತಿದ್ದನು.

ಚಾಟಿಂಗ್​ನಲ್ಲಿ ಭದ್ರತೆಗೆ ಅಪಾಯವೊಡ್ಡುವ ವಿಚಾರಗಳ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಯುವತಿಯ ಚಾಟಿಂಗ್ ಗಮನಿಸಿ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಭದ್ರತಾ ಸಿಬ್ಬಂದಿ ಮುಂಬೈ ವಿಮಾನ ತಡೆದು ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಿದ್ದಾರೆ.

ಭದ್ರತಾ ಸಿಬ್ಬಂದಿ ಸದ್ಯ ಯುವಕ ಮತ್ತು ಯುವತಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ತಮಾಷೆಗಾಗಿ ಮಾಡಿದ್ದಾಗಿ ಜೋಡಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *