ಮಂಗಳೂರು: ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೊ ನಿಗೂಢ ಸ್ಪೋಟ: ಪ್ರಯಾಣಿಕನ ಹೇಳಿಕೆಯಿಂದ ಹೆಚ್ಚಾದ ಅನುಮಾನ – Mangalore running auto blast NIA Team to visit spot


Autorickshaw Explodes in Mangalore: ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ.

ಮಂಗಳೂರು: ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೊ ನಿಗೂಢ ಸ್ಪೋಟ: ಪ್ರಯಾಣಿಕನ ಹೇಳಿಕೆಯಿಂದ ಹೆಚ್ಚಾದ ಅನುಮಾನ

ಸ್ಪೋಟಗೊಂಡ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆ

ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿದೆ.

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು ಈಗಾಗಲೇ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿವೆ.

ಇನ್ನು ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ. ಘಟನಾ ಸ್ಥಳದ 1 ಕಿ.ಮೀ ದೂರದ ನಾಗುರಿ ಬಳಿ ಆಟೋ ಹತ್ತಿದ್ದು ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧ ಭಾಗ ಸುಟ್ಟ ಗಾಯವಾಗಿದೆ. ಕೈ, ಎದೆ, ಮುಖದ ಭಾಗಕ್ಕೆ ಗಾಯವಾಗಿದ್ದು ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಯಾಣಿಕನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

TV9 Kannada


Leave a Reply

Your email address will not be published.