
ಕೇರಳದ ಪ್ರಖ್ಯಾತ ಜ್ಯೋತಿಷಿಯಿಂದ ತಾಂಬೂಲ ಪ್ರಶ್ನೆ ಪ್ರಕ್ರಿಯೆ ನಡೆಯುತ್ತಿದೆ
ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು ಎಂದು ತಿಳಿಯುತ್ತೆ. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ತಾಂಬೂಲ ಪ್ರಶ್ನೆಯಲ್ಲಿ ಹಿಂದೂ ಧಾರ್ಮಿಕ ಸ್ಥಳ ಎಂದು ಉತ್ತರ ಸಿಕ್ಕಿದೆ.
ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಮಳಲಿಯ ಮಸೀದಿ (Malali Masjid) ಸ್ಥಳದಲ್ಲಿ ಇಂದು (ಮೇ 25) ತಾಂಬೂಲ ಪ್ರಶ್ನೆ ನಡೆಸಲಾಗಿದೆ. ತಾಂಬೂಲ ಪ್ರಶ್ನೆ (Tambula Preshne) ವೇಳೆ ಕೇರಳದ ಪ್ರಖ್ಯಾತ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಕೆಲ ಮಾಹಿತಿ ನೀಡಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದಿದ್ದಾರೆ. ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು ಎಂದು ತಿಳಿಯುತ್ತೆ. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ತಾಂಬೂಲ ಪ್ರಶ್ನೆಯಲ್ಲಿ ಹಿಂದೂ ಧಾರ್ಮಿಕ ಸ್ಥಳ ಎಂದು ಉತ್ತರ ಸಿಕ್ಕಿದೆ ಎಂದು ಕೇರಳದ ಪ್ರಖ್ಯಾತ ಜ್ಯೋತಿಷಿ ತಿಳಿಸಿದ್ದಾರೆ.