ತುಮಕೂರು: ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯರು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.

ಮಂಗಳಮುಖಿಯರು ಹಣ ಕೇಳಿದಾಗ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಕೋಡ್ಲಾಪುರ ಗ್ರಾಮಪಂಚಾಯತ್ ಸದಸ್ಯ ರಂಗನಾಥ್ ಹಲ್ಲೆಗೊಳಗಾಗಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಹರಿದಾಡ್ಕೊಂಡು ಮಂಗಳಮುಖಿಯರ ಮಾರಾಮಾರಿ

ರಂಗನಾಥ್ ಅವರ ಬೈಕನ್ನು ಅಡ್ಡಗಟ್ಟಿ ಇಬ್ಬರು ಮಂಗಳಮುಖಿಯರು ಹಣ ಕೇಳಿದ್ದಾರೆ. ರಂಗನಾಥ್ ಹಣ ನೀಡಲು ನಿರಾಕರಿಸಿದಾಗ ರಂಗನಾಥ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ಮಂಗಳ ಮುಖಿಯರ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರ ಮೇಲೆ ಇಂಥಹ ಹಲ್ಲೆಗಳು ಮೇಲಿಂದ ಮೇಲೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

The post ಮಂಗಳ ಮುಖಿಯರಿಂದ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ appeared first on Public TV.

Source: publictv.in

Source link