ಮಂಡ್ಯ: ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿ ಕೊರೊನಾ ಸೋಂಕಿತ ಮೃತಪಟ್ಟಿದ್ದಾನೆ.

29 ವರ್ಷದ ಇಂಡುವಾಳು ಗ್ರಾಮದ ಸುನೀಲ್​​​ಗೆ 14 ದಿನಗಳ ಹಿಂದೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆ ಮಿಮ್ಸ್ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಮಧ್ಯಾಹ್ನ ವಿದ್ಯುತ್ ಸಂಪರ್ಕ ಕಡಿತವಾದಾಗ ಬ್ಯಾಕಪ್ ಇಲ್ಲದಿರೋದ್ರಿಂದ ಸುನೀಲ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಅಲ್ದೆ ಮೃತದೇಹ ಕೊಡಲು ವೈದ್ಯರು ನಿರಾಕರಿಸಿದ್ದರು. ಆಸ್ಪತ್ರೆಯಲ್ಲಿ ಗೋಳಾಡಿ, ಅವ್ಯವಸ್ಥೆ ವಿರುದ್ಧ ಕಿಡಿಕಾರಿದಕ್ಕೆ ಕುಟುಂಬಸ್ಥರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಅಂತ ಆರೋಪ ಮಾಡಲಾಗಿದೆ. ಬಳಿಕ ಪೊಲೀಸರ ಮಧ್ಯಸ್ಥಿಕೆಯಿಂದ ಮೃತನ ಶವ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

The post ಮಂಡ್ಯ ಮಿಮ್ಸ್ ಆಸ್ಪತ್ರೆ ICUನಲ್ಲಿ ಕರೆಂಟ್ ಇಲ್ಲದೆ ಪ್ರಾಣಬಿಟ್ಟ ಸೋಂಕಿತ appeared first on News First Kannada.

Source: newsfirstlive.com

Source link