ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ
ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್‌ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ಕಾಲೇಜು ವಿದ್ಯಾರ್ಥಿನಿ!