ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಜೂನ್ 1 ರಂದು ಸಿದ್ದರಾಮಯ್ಯ  ಆಸ್ಪತ್ರೆಗೆ ದಾಖಲಾಗಿದ್ದರು. ಈ ಮಧ್ಯೆ ಒಟ್ಟು ಮೂರು ಬಾರಿ ಸಿದ್ದರಾಮಯ್ಯ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು ಟೆಸ್ಟ್ ರಿಪೋರ್ಟ್  ನೆಗೆಟಿವ್ ಬಂದಿದೆ. ಇದನ್ನೂ ಓದಿ: ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

ಸಿದ್ದರಾಮಯ್ಯ ವೈರಲ್ ಫೀವರ್ ನಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ 6  ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆದಿದ್ದಾರೆ. ಪುತ್ರ ಶಾಸಕ ಯತೀಂದ್ರ ಜೊತೆಗಿದ್ದು ಸಿದ್ದರಾಮಯ್ಯ ಯೋಗಕ್ಷೇಮ ನೋಡಿಕೊಂಡಿದ್ದರು.  ಒಂದು ವಾರಗಳ ಕಾಲ ಸಿದ್ದರಾಮಯ್ಯ ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿದ್ದು, ಬಳಿಕ ಗುಣಮುಖರಾಗಿದ್ದರು.

The post ಮಣಿಪಾಲ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್ appeared first on Public TV.

Source: publictv.in

Source link