
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ
ರಾಜಕೀಯದ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಹೆಚ್ಡಿ ದೇವೇಗೌಡರು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಭೇಟಿ ಮಾಡುತ್ತಿದ್ದಾರೆ. ಎಲ್ಲ ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ಬಗ್ಗೆ ಚರ್ಚಿಸಲು ಬಂದಿರಬಹುದು. ಸದ್ಯ ಎಲ್ಲಾ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ.
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮತ್ತೆ ತೃತೀಯ ರಂಗ ರಚನೆ ಸುಳಿವು ನೀಡಿದ್ದಾರೆ. ತೆಲಂಗಾಣ ಸಿಎಂ ಮತ್ತು ದೇವೇಗೌಡರ ಸಂಬಂಧ ತುಂಬಾ ಅನೋನ್ಯವಾಗಿದೆ. ರಾಜಕೀಯದ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಹೆಚ್ಡಿ ದೇವೇಗೌಡರು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಭೇಟಿ ಮಾಡುತ್ತಿದ್ದಾರೆ. ಎಲ್ಲ ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ಬಗ್ಗೆ ಚರ್ಚಿಸಲು ಬಂದಿರಬಹುದು. ಸದ್ಯ ಎಲ್ಲಾ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ. ದೇವೇಗೌಡರ ಭೇಟಿ ವೇಳೆ ತೃತೀಯ ರಂಗ ರಚನೆ ಬಗ್ಗೆ ಚರ್ಚೆ ಆಗಬಹುದು. ಈ ಭೇಟಿ ತೃತೀಯ ರಂಗ ರಚನೆ ಮೊದಲ ಹಂತವಾಗಿದೆ ಎಂದು ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಟ್ಟುಗೂಡಿಸಲು H.D.ದೇವೇಗೌಡರ ಮಾರ್ಗದರ್ಶನ ಪಡೆಯಲು ಕೆಸಿಆರ್ ಬರುತ್ತಿದ್ದಾರೆ. ಜೆಡಿಎಸ್ ಮುಗಿದೇ ಹೋಯಿತು, ಮುಳುಗಿದ ಹಡಗು ಎಂದು ಹೇಳುವ ಕಾಂಗ್ರೆಸ್ & ಬಿಜೆಪಿ ನಾಯಕರಿಗೆ ಇಲ್ಲಿಂದಲೇ ಉತ್ತರ ಕೊಡುತ್ತೇವೆ ಎಂದು ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.