ಮತ್ತೆ ಮುನ್ನಲೆಗೆ ಬಂದ ಆಪರೇಷನ್ ಕಮಲ; 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ- ನಳಿನ್ ಕುಮಾರ್ ಕಟೀಲ್ ಮಾಹಿತಿ | More than 10 MLAs will join the BJP Nalin Kumar Kateel said in Bengaluru


ಮತ್ತೆ ಮುನ್ನಲೆಗೆ ಬಂದ ಆಪರೇಷನ್ ಕಮಲ; 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ- ನಳಿನ್ ಕುಮಾರ್ ಕಟೀಲ್ ಮಾಹಿತಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಆಪರೇಷನ್ ಕಮಲದ ಸುಳಿವು ಬಿಟ್ಟು ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel), ಚುನಾವಣೆವರೆಗೆ (Election) ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಬಿಜೆಪಿಯಲ್ಲಿ ಬಹಳ ಜನ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಹೆಚ್ಚು ಅವಶ್ಯಕತೆ ಬರಲ್ಲ. ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ. ಸಿಎಂ ಸಂಪರ್ಕದಲ್ಲಿ ಇದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ನಾವು ತೆಗೆದುಕೊಂಡ ನಿರ್ಣಯದ ಮೇಲೆ ವರಿಷ್ಠರು ಸಹಕಾರ ಕೊಡುತ್ತಾರೆ. ನಾನು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದರು.

10ಕ್ಕೂ ಹೆಚ್ಚು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ ಕಟೀಲ್, ಶಾಸಕರು ಬಿಜೆಪಿ ಸೇರ್ಪಡೆಗೆ ಕಾದು ಕುಳಿತಿದ್ದಾರೆ. ಚುನಾವಣೆಗೂ ಮುನ್ನವೆ ಶಾಸಕರು ಬಿಜೆಪಿಗೆ ಸೇರ್ಪಡೆ ಆಗುತ್ತಾರೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂದು ತಿಳಿಸಿದರು.

ನಾವು ಎಲ್ಲ ರೀತಿಯ ಸರ್ವೆಗಳನ್ನೂ ಮಾಡುತ್ತೇವೆ. ಈಗಾಗಲೇ ಸರ್ವೆ ಕಾರ್ಯಗಳು ಪ್ರಾರಂಭ ಆಗುತ್ತಿವೆ. ಸರ್ಕಾರ, ಜನಾಭಿಪ್ರಾಯ ಎಲ್ಲವನ್ನೂ ನಾವು ನೋಡುತ್ತೇವೆ. ಸರ್ಕಾರ & ಪಕ್ಷ ಒಟ್ಟಾಗಿ ಮುಂದಿನ ಚುನಾವಣೆ ಎದುರಿಸ್ತೇವೆ ಅಂತ ಕಟೀಲ್ ತಿಳಿಸಿದರು. ಶ್ರೀಗಳಿಗೆ 50 ಟಿಕೆಟ್ಗಳನ್ನು ನೀಡಿ ಅಂತಾ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ನಮ್ಮ ಗುರುಗಳು. ಸರಸ್ವತಿ ಸ್ವಾಮೀಜಿ ಮೇಲೆ ಅಪಾರ ಗೌರವ ಇದೆ. ರಾಜಕಾರಣದ ಬಗ್ಗೆ ಅವರು ಏನು ಹೇಳಿದ್ದಾರೋ ಗೊತ್ತಿಲ್ಲ. ಸ್ವಾಮೀಜಿ ಹೇಳಿಕೆ ಬಗ್ಗೆ ವಿಚಾರಿಸುತ್ತೇನೆ ಎಂದರು.

ಮುಂಬರುವ ಚುನಾವಣೆಗೆ ಬಿಜೆಪಿ ನಾಯಕರು ಪ್ರವಾಸ ನಡೆಸುವ ಹಿನ್ನೆಲೆ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಪಕ್ಷ ಸಂಘಟನೆ, ಚುನಾವಣೆ ತಯಾರಿ ಬಗ್ಗೆ ನಾಯಕರ ಜತೆ ಚರ್ಚೆ ನಡೆಸಿದ್ದಾರೆ. ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ವಿ.ಸೋಮಣ್ಣ, ಗೋಪಾಲಯ್ಯ, ಭೈರತಿ ಬಸವರಾಜ್, ಪಕ್ಷ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

TV9 Kannada


Leave a Reply

Your email address will not be published.