ಮತ್ತೆ ಸ್ಟಾರ್ಟ್​ ಆಗ್ತಿದೆ ಬಿಗ್​ ಬಾಸ್; ಸೆಕೆಂಡ್ ಇನ್ನಿಂಗ್ಸ್​​ನಲ್ಲಿ ಮೊದಲಿದ್ದವರೇ ಇರ್ತಾರಾ..?

ಮತ್ತೆ ಸ್ಟಾರ್ಟ್​ ಆಗ್ತಿದೆ ಬಿಗ್​ ಬಾಸ್; ಸೆಕೆಂಡ್ ಇನ್ನಿಂಗ್ಸ್​​ನಲ್ಲಿ ಮೊದಲಿದ್ದವರೇ ಇರ್ತಾರಾ..?

ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆ ಅರ್ಧಕ್ಕೇ ತೆರೆ ಎಳೆಯಲಾಗಿದ್ದ ಬಿಗ್​ಬಾಸ್ ಸೀಸನ್ 8 ಸೆಂಕೆಂಡ್ ಇನ್ನಿಂಗ್ಸ್ ಪ್ರಾರಂಭವಾಗಲಿದೆ ಎಂದು ಪರಮೇಶ್ವರ್ ಗುಂಡ್ಕಲ್ ಮಾಹಿತಿ ನೀಡಿದ್ದಾರೆ. ಈ ಕುರಿತು ಫೇಸ್​ಬುಕ್ ಪೋಸ್ಟ್ ಹಾಕಿರುವ ಪರಮೇಶ್ವರ್ ಗುಂಡ್ಕಲ್ ಈಗಾಗಲೇ ಕೆಲಸ ಪ್ರಾರಂಭಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಅವರ ಫೇಸ್​ಬುಕ್ ಪೋಸ್ಟ್​ನಲ್ಲಿ ಏನಿದೆ..?
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.
ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್​ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.

The post ಮತ್ತೆ ಸ್ಟಾರ್ಟ್​ ಆಗ್ತಿದೆ ಬಿಗ್​ ಬಾಸ್; ಸೆಕೆಂಡ್ ಇನ್ನಿಂಗ್ಸ್​​ನಲ್ಲಿ ಮೊದಲಿದ್ದವರೇ ಇರ್ತಾರಾ..? appeared first on News First Kannada.

Source: newsfirstlive.com

Source link