ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆದ ಅಲ್ಲು ಅರ್ಜುನ್; ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ | Trivikram Srinivas Doing New Pan India Movie With Allu Arjun here is The Details


ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಪುಷ್ಪ’ ಬಳಿಕ ಅವರು ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರಕ್ಕಾಗಿ ಸಿದ್ಧರಾಗುತ್ತಿದ್ದಾರೆ.

ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆದ ಅಲ್ಲು ಅರ್ಜುನ್; ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ

ತ್ರಿವಿಕ್ರಂ ಶ್ರೀನಿವಾಸ್-ಅಲ್ಲು ಅರ್ಜುನ್

ತ್ರಿವಿಕ್ರಂ ಶ್ರೀನಿವಾಸ್​ಗೆ (Trivikram Srinivas) ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಈವರೆಗೆ ಮಾಡಿರೋ ಸಿನಿಮಾಗಳು ನೇರವಾಗಿ ಟಾಲಿವುಡ್​ನಲ್ಲೇ (Tollywood) ರಿಲೀಸ್ ಆಗಿವೆ. ಈಗ ಅವರು ಹೊಸ ಸಿನಿಮಾ ಮಾಡೋಕೆ ರೆಡಿ ಆಗಿದ್ದಾರೆ. ವಿಶೇಷ ಎಂದರೆ ಇದು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋದು ವಿಶೇಷ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದ್ದು ಶೀಘ್ರವೇ ಎಲ್ಲವೂ ಫೈನಲ್ ಆಗುವ ಸಾಧ್ಯತೆ ಇದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಹುದು ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿದೆ.

ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಪುಷ್ಪ’ ಬಳಿಕ ಅವರು ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರಕ್ಕಾಗಿ ಸಿದ್ಧರಾಗುತ್ತಿದ್ದಾರೆ. ಈ ಸಿನಿಮಾ ತೆಲುಗು, ತಮಿಳು, ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ‘ಪುಷ್ಪ’ ಚಿತ್ರದಿಂದ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದ್ದು, ‘ಪುಷ್ಪ 2’ ಚಿತ್ರದಿಂದ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಲಿದೆ. ಈ ಚಿತ್ರ ಮುಗಿದ ಬಳಿಕ ಅವರು ತ್ರಿವಿಕ್ರಂ ಶ್ರೀನಿವಾಸ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ತಿಳಿದು ಬಂದಿದೆ.

ತ್ರಿವಿಕ್ರಂ ಶ್ರೀನಿವಾಸ್ ಅವರು ಮಹೇಶ್ ಬಾಬು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಜನವರಿ 12, 2023ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಕೆಲಸಗಳು ಮುಗಿದ ಬಳಿಕ ಅವರು ಅಲ್ಲು ಅರ್ಜುನ್ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಕೆಲಸ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು ಅನ್ನೋದು ವಿಶೇಷ. ‘ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಚಿತ್ರಗಳಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಮೂರು ಚಿತ್ರಗಳು ಹಿಟ್ ಸಿನಿಮಾ ಎನಿಸಿಕೊಂಡಿದೆ. ಈಗ ನಾಲ್ಕನೇ ಚಿತ್ರಕ್ಕಾಗಿ ಈ ಜೋಡಿ ಸಿದ್ಧವಾಗುತ್ತಿದೆ.

TV9 Kannada


Leave a Reply

Your email address will not be published. Required fields are marked *