ಮತ್ತೊಮ್ಮೆ ಸಿಎಂ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಕನ್ನಡ ಮಾಯ!

ಬೆಂಗಳೂರು: ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದ ಉದ್ಘಾಟನೆ ಸಮಾರಂಭದಲ್ಲಿ ಕನ್ನಡವನ್ನು ನಿರ್ಲಕ್ಷ್ಯ ಮಾಡಿದ ಪ್ರಕರಣ ಮಾಸುವ ಮುನ್ನವೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಿದ್ದ ಮತ್ತೊಂದು ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯೇ ಮಾಯವಾಗಿದೆ.

ಇಂದು ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಆಸ್ಪತ್ರೆ ಅಡಿಗಲ್ಲೂ ಕಾರ್ಯಕ್ರಮದಲ್ಲಿ ಹಾಕಿದ್ದ ಯಾವುದೇ ಬ್ಯಾನರ್​​, ವೇದಿಕೆ ಮೇಲೆ ಕನ್ನಡವನ್ನು ಬಳಕೆ ಮಾಡಿರಲೇ ಇಲ್ಲ. ರಾಜ್ಯ ಆರೋಗ್ಯ ಇಲಾಖೆಯ ಅಧಿಕೃತ ಕಾರ್ಯಕ್ರಮದಲ್ಲೇ ಕನ್ನಡವನ್ನ ಬಳಕೆ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ರಾಜ್ಯ ಸರ್ಕಾರ ಅಧಿಕೃತ ಕಾರ್ಯಕ್ರಮದಲ್ಲೇ ಪದೇ ಪದೇ ಕನ್ನಡ ಬಳಕೆ ಮಾಡುವ ಬಗ್ಗೆ ಅಧಿಕಾರಿಗಳು ಅಸಡ್ಡೆ ಮನೋಭಾವ ತೋರುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಹಿಂದೆ ಮೆಟ್ರೋ ಉದ್ಘಾಟನೆಯಲ್ಲಿ ಕನ್ನಡ ಬಳಕೆ ಮಾಡದ ಕಾರಣ ಆಕ್ರೋಶ ವ್ಯಕ್ತವಾದ ಬಳಿಕ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್​ ಕುಮಾರ್ ಅವರು, ಸರ್ಕಾರ ಆಡಳಿತ ಭಾಷೆಯಾಗಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದರೂ ಕರ್ತವ್ಯ ಲೋಪ ತೋರಿದ್ದ ಅಧಿಕಾರಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಲು ಮನವಿ ಮಾಡಿದ್ದರು.

News First Live Kannada

Leave a comment

Your email address will not be published. Required fields are marked *