ಮದಗಜ ಶೂಟಿಂಗ್ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟು ಬಿದ್ದಿದ್ದು 15 ದಿನ ವಿಶ್ರಾಂತಿಗೆ ಸೂಚಿಸಲಾಗಿದೆ.

ಏಪ್ರಿಲ್ 5ರಿಂದ ಆರಂಭವಾಗಿದ್ದ ಶೂಟಿಂಗ್ ನಲ್ಲಿ ಮುರುಳಿ ಭಾಗವಹಿಸಿದ್ದರು. ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಮುರುಳಿ ಕಾಲಿಗೆ ಪೆಟ್ಟು ಬಿದ್ದಿದೆ.

ನಿರ್ದೇಶಕ ಮಹೇಶ್ ಕುಮಾರ್ ಮತ್ತು ಚಿತ್ರತಂಡ ಹಾಗೂ ನಿರ್ಮಾಪಕ ಉಮಾಪತಿ ಎಸ್ ಗೌಡ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. 

ಶ್ರೀಮುರುಳಿಗೆ ವೈದ್ಯರು 15 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ.

ಮದಗಜ ಸಿನಿಮಾ ಶೂಟಿಂಗ್ ಅಂತಿಮ ಹಂತದಲ್ಲಿದ್ದು, ಎರಡು ದೃಶ್ಯಗಳ ಹಾಡುಗಳ ಶೂಟಿಂಗ್ ಮಾತ್ರ ಬಾಕಿ ಉಳಿದಿತ್ತು. ಆಶಿಕಾ ರಂಗನಾಥ್ ಶ್ರೀಮರುಳಿಗೆ ನಾಯಕಿಯಾಗಿದ್ದಾರೆ.

ಜಗಪತಿ ಬಾಬು ಖಳನಾಯಕನ ಪಾತ್ರದಲ್ಲಿ ಹಾಗೂ ದೇವಯಾನಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ, ರವಿ ಬಸ್ರೂರ್ ಸಿನಿಮಾಗೆ ಸಂಗಿತ ನೀಡಿದ್ದಾರೆ.

Source: Kannadaprabha – ಸಿನಿಮಾ ಸುದ್ದಿ – https://www.kannadaprabha.com/cinema/news/
Read More