ಬೆಂಗಳೂರು: ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಗುಡ್​ನ್ಯೂಸ್​ ನೀಡಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಬಾರ್​ಗಳನ್ನ ತೆರೆಯಲು ಅನುಮತಿ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಜಿಲ್ಲೆಗಳಿಗೆ ವಿಧಿಸಿದ್ದ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಿದೆ. ಅದರ ಜೊತೆಗೆ ಮದ್ಯದಂಗಡಿಗಳನ್ನ ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅನುಮತಿ ನೀಡಿದೆ. ಇದಕ್ಕೂ ಮೊದಲು ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶ ನೀಡಿತ್ತು.

ಇನ್ನು ಪಾರ್ಕ್​​ಗಳನ್ನ ತೆರೆಯಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು, ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೂ ತೆರೆದಿರಲು ಅವಕಾಶ ನೀಡಿದೆ.

The post ಮದ್ಯ ಪ್ರಿಯರಿಗೆ ಗುಡ್​ನ್ಯೂಸ್​; ಮಧ್ಯಾಹ್ನ 2 ಗಂಟೆವರೆಗೂ ಬಾರ್ ಓಪನ್ appeared first on News First Kannada.

Source: newsfirstlive.com

Source link