ಬೆಂಗಳೂರು: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್​ಗೆ ಸೇರ್ಪಡೆಯಾಗಿರುವ ಮಧು ಬಂಗಾರಪ್ಪ ಅವರು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಇಬ್ಬರೂ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಕಾರವಾರ ಅಂಕೋಲಾ ಕ್ಷೇತ್ರದ ಮಾಜಿ ಶಾಸಕರಾಗಿರುವ ಮಾಜಿ ಸಚಿವ ಆನಂದ್ ಆಸ್ನೋಟಿಕರ್, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ರು. ಆ ಬಳಿಕ ಲೋಕಸಭಾ ಚುನಾವಣೆಗೂ ಜೆಡಿಎಸ್​ ಪಕ್ಷದಿಂದಲೇ ಸ್ಪರ್ಧೆ ಮಾಡಿ ಸೋಲುಂಡಿದ್ದರು. ಸದ್ಯ ಬೆಂಗಳೂರಿನ ಮಧು ಬಂಗಾರಪ್ಪ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಈ ನಡುವೆ ಆನಂದ್ ಅಸ್ನೋಟಿಕರ್ ಜೆಡಿಎಸ್ ಪಕ್ಷ ತೊರೆಯಲು ಸಿದ್ಧತೆ ನಡೆಸಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಹಿಂದೆಯೂ ತಮ್ಮ ರಾಜಕೀಯ ನಡೆಯ ಕುರಿತು ಮಾತನಾಡಿದ್ದ ಆನಂದ್ ಅಸ್ನೋಟಿಕರ್ ಅವರು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ನಿಲ್ಲುವುದಿಲ್ಲ ಎಂದು ಹೇಳಿದ್ದರು.

The post ಮಧು ಬಂಗಾರಪ್ಪ ಭೇಟಿಯಾದ ಆನಂದ್ ಅಸ್ನೋಟಿಕರ್: ಜೆಡಿಎಸ್​ನಿಂದ​ ದೂರ ಸರಿದ್ರಾ..? appeared first on News First Kannada.

Source: newsfirstlive.com

Source link