ಮೈಸೂರು: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್​​ ಕೊರತೆ ಉಂಟಾದ ಬೆನ್ನಲ್ಲೇ 24 ರೋಗಿಗಳು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಗೆ ಪ್ರತಿನಿತ್ಯ ಮೈಸೂರಿನಿಂದ ಆಮ್ಲಜನಕ ಪೂರೈಕೆಯಾಗುತ್ತದೆ. ಹೀಗಾಗಿ ಘಟನೆ ಬಳಿಕ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಮೈಸೂರು ಜಿಲ್ಲಾಡಳಿತದ ವಿರುದ್ಧ ಆರೋಪ ಕೇಳಿಬಂದಿತ್ತು. ಇದಕ್ಕೆ ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು, ನಾವು ಕಳೆದ ಮಧ್ಯರಾತ್ರಿವರೆಗೆ 250 ಆಕ್ಸಿಜನ್​ ಸಿಲಿಂಡರ್​ ಕೇಳುಹಿಸಿದ್ದೇವೆ ಎಂದು ಹೇಳಿದೆ.

ನಿನ್ನೆ ರಾತ್ರಿ 12.30ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು‌ 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಲಿಕ್ವಿಡ್ ಆಕ್ಸಿಜನ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ ಎಂದು ಮಾಹಿತಿ ನೀಡಿದೆ.

ನಾವು ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ. ಮೈಸೂರಿನ ಸದ್ರನ್ ಗ್ಯಾಸ್ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್​ಗಳನ್ನ ಚಾಮರಾಜನಗರಕ್ಕೆ ನಿನ್ನೆ ಮಧ್ಯರಾತ್ರಿಯೇ ರವಾನೆ ಮಾಡಿದ್ದೇವೆ ಎಂದು ತಿಳಿಸಿದೆ.

The post ಮಧ್ಯರಾತ್ರಿವರೆಗೆ ಚಾಮರಾಜನಗರಕ್ಕೆ 250 ಆಕ್ಸಿಜನ್​ ಸಿಲಿಂಡರ್​ ಕಳಿಸಿದ್ವಿ- ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ appeared first on News First Kannada.

Source: newsfirstlive.com

Source link