ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮಾಜಿ ಪೊಲೀಸ್ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿರೋ ಭಯೋತ್ಪಾದಕರು ವಿಶೇಷ ಪೊಲೀಸ್ ಅಧಿಕಾರಿ ಹಾಗೂ ಪತ್ನಿಯ ಮೇಲೆ ಗುಂಡು ಹತ್ಯೆ ಮಾಡಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾದ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಭಾನುವಾರ ರಾತ್ರಿ 11 ಗಂಟೆ ಸಮಯದಲ್ಲಿ ಪೊಲೀಸ್​ ಅಧಿಕಾರಿ ಫಯಾಜ್ ಅಹ್ಮದ್​ ನಿವಾಸಕ್ಕೆ ನುಗ್ಗಿ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ, ರಕ್ಷಣೆಗೆ ಬಂದ ಕುಟುಂಬಸ್ಥರ ಮೇಲೂ ಫೈರಿಂಗ್ ಮಾಡಿದ್ದಾರೆ. ಉಗ್ರರ ದಾಳಿಯಲ್ಲಿ ಎಸ್​​ಪಿಒ ಫಯಾಜ್​ ಅಹ್ಮದ್​​, ಪತ್ನಿ ರಜಾ ಬೇಗಮ್​ ಹಾಗೂ ಅವರ ಪುತ್ರಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಫಯಾಜ್​ ಅಹ್ಮದ್​ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ.

ಸದ್ಯ ಫಯಾಜ್​ ಅಹ್ಮದ್ ಅವರ ಪುತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಕಾರ್ಯಾಚರಣೆಯನ್ನು ಕೈಗೊಂಡಿದೆ. ಜಮ್ಮು ವಾಯನೆಲೆಯ ಮೇಲೆ ಡ್ರೋಣ್​​ನಲ್ಲಿ ಐಇಡಿ ದಾಳಿ ನಡೆದ ಕೆಲ ಗಂಟೆಗಳಲ್ಲೇ ಉಗ್ರರು ಪೊಲೀಸ್ ಅಧಿಕಾರಿ ಮನೆ ಮೇಲೆ ದಾಳಿ ಮಾಡಿದ್ದಾರೆ.

The post ಮನೆಗೆ ನುಗ್ಗಿ ಉಗ್ರರ ಅಟ್ಟಹಾಸ: ಪೊಲೀಸ್ ಅಧಿಕಾರಿ ಹುತಾತ್ಮ, ರಕ್ಷಣೆಗೆ ಬಂದ ಪತ್ನಿಯೂ ಸಾವು appeared first on News First Kannada.

Source: newsfirstlive.com

Source link