ಬೆಂಗಳೂರು: ಇಂದು 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಮನೆಯಲ್ಲೇ ಇದ್ದು ಯೋಗ ಆಚರಿಸಿ, ಸ್ವಾಸ್ಥ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಯೋಗ ದಿನಾಚರಣೆ ಮಾಡಲಾಗ್ತಿದೆ. ಈ ಹಿನ್ನೆಲೆ ಸಿಎಂ ಬಿ.ಎಸ್​ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಯೋಗ ದಿನ ಆಚರಿಸಿದರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕೂಡ ಉಪಸ್ಥಿತರಿದ್ದು ಯೋಗ ಮಾಡಿದರು. ಬಳಿಕ ಪ್ರಧಾನಿ ಮೋದಿ ಅವರ ವರ್ಚುವಲ್ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದ್ರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕೂಡ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯ್ತು. ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆನ್​ಲೈನ್​ ಮೂಲಕ ಕಾರ್ಯಕ್ರಮಕ್ಕೆ ‌ಚಾಲನೆ ನೀಡಿದರು.

 

ನಿರ್ಮಲಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೊತೆಗೆ DCM ಅಶ್ವಥ್ ನಾರಾಯಣ್, ಸಚಿವ ನಾರಾಯಣ ಗೌಡ, ಆಯುಷ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.

The post ಮನೆಯಲ್ಲೇ ಸಿಎಂ ಯಡಿಯೂರಪ್ಪರಿಂದ ಯೋಗ ದಿನಾಚರಣೆ appeared first on News First Kannada.

Source: newsfirstlive.com

Source link