ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಯುವತಿಯ ತಂದೆ ಬಂದಗಿಸಾಬ್, ಲಾಳೇಸಾಬ್ ವಲ್ಲಿಬಾಯಿ, ಅಲ್ಲಾ ಪಟೇಲ್, ರಫಿಕ್ ಹಾಗೂ ಯುವತಿಯ ಅಣ್ಣ ದಾವಲ್ ಪಟೇಲ್ ನ್ಯಾಯಾಂಗ ಬಂಧನಕ್ಕೊಳಗಾದ ಆರೋಪಿಗಳು.

ಯುವತಿಯ ತಂದೆ ಹಾಗೂ ಕುಟುಂಬಸ್ಥರು ಸೇರಿ ಪ್ರೇಮಿಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಘಟನೆ ಬಳಿಕ ಮರ್ಯಾದಾ ಹತ್ಯೆಯ ಆರೋಪಿಗಳು ಪರಾರಿಯಾಗಿದ್ದರು. ಇದೀಗ ಪ್ರಕರಣದ ಎಲ್ಲ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಮಿಗಳಿಬ್ಬರನ್ನು ಭೀಕರವಾಗಿ ಕೊಲೆ ಮಾಡಿದ್ದ ಐವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ವಿಜಯಪುರ ಆಟ್ರಾಸಿಟಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡೆಸಿದ್ದರು. ನಂತರ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವಿಜಯಪುರ ವಿಶೇಷ ಕೋರ್ಟ್ ಜುಲೈ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

The post ಮರ್ಯಾದಾ ಹತ್ಯೆಯ ಎಲ್ಲ ಆರೋಪಿಗಳು ಅಂದರ್ appeared first on Public TV.

Source: publictv.in

Source link