ಉಡುಪಿ: ಆಗುಂಬೆ ಘಾಟಿಯಲ್ಲಿ ಘನ-ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 169(ಎ)ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರೀ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೀಗಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ ಪ್ರಕಾರ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15ರ ವರೆಗೆ 12 ಟನ್​ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ ಆದೇಶಿಸಿದ್ದಾರೆ.

ಭಾರೀ ವಾಹನಗಳು ಬದಲಿ ಮಾರ್ಗವಾದ ಉಡುಪಿ-ಸಿದ್ದಾಪುರ-ಹೊಸಂಗಡಿ-ಬಾಳೆಬರೇ ಘಾಟ್ ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ -ಹೆಬ್ರಿ-ಸಿದ್ದಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ – ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಆದೇಶಿಸಲಾಗಿದೆ.

The post ಮಳೆಗಾಲದ ಪ್ರಾರಂಭದಲ್ಲೇ ಆಗುಂಬೆ ಘಾಟ್​ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ appeared first on News First Kannada.

Source: newsfirstlive.com

Source link