ಮಳೆಯಿಂದಾಗಿ ಏಕಾಏಕಿ ಕುಸಿದ ಗೋಡೆ: ಮಹಿಳೆ ಬದುಕುಳಿದಿದ್ದೇ ಒಂದು ಪವಾಡ, ಇಲ್ಲಿದೆ ವಿಡಿಯೋ | Woman rescued after house collapses due to rainಇಂದು ಬೆಳಗಿನ ಜಾವ 7 ಗಂಟೆ ಸುಮಾರಿಗೆ ರೊಟ್ಟಿ ಮಾಡುವ ವೇಳೆ ಏಕಾಏಕಿ ಗೋಡೆ ಕುಸಿದಿದೆ. ಅವಶೇಷಗಳಡಿ ಸಿಲುಕಿದ ಮಹಿಳೆಯನ್ನು ಸ್ಥಳೀಯರು ಹೊರ ತೆಗೆದರು.

TV9kannada Web Team


| Edited By: ಗಂಗಾಧರ್​ ಬ. ಸಾಬೋಜಿ

Oct 03, 2022 | 8:18 PM
ಬೆಳಗಾವಿ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ಸುರಿದಿದ್ದು, ಮಳೆಗೆ ಮನೆಗೋಡೆ ಕುಸಿದು ಅವಶೇಷಗಳಡಿ ಸಿಲುಕಿದ್ದ ಮಹಿಳೆಯ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ‌.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 7 ಗಂಟೆ ಸುಮಾರಿಗೆ ರೊಟ್ಟಿ ಮಾಡುವ ವೇಳೆ ಏಕಾಏಕಿ ಗೋಡೆ ಕುಸಿದಿದೆ. ಅವಶೇಷಗಳಡಿ ಸಿಲುಕಿದ ಮಹಿಳೆಯನ್ನು ಸ್ಥಳೀಯರು ಹೊರ ತೆಗೆದರು. ರಕ್ಷಣೆ ಮಾಡುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಮನೆಗೋಡೆ ಕುಸಿದು ಕಾಳವ್ವ ಕಮ್ಮಾರ ಎಂಬ ಮಹಿಳೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡುತ್ತಿಲ್ಲವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published.