ಬೆಂಗಳೂರು: ಗುರುವಾರ ರಾತ್ರಿಯಿಡೀ ಸುರಿದ ಭಾರೀ ಮಳೆ ತಡೆ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಅಧಿಕಾರಿಗಳ ಸಭೆ ನಡೆಯಿತು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದ ಬಸವರಾಜ ಬೊಮ್ಮಾಯಿ, ವಿಪತ್ತು ನಿರ್ವಹಣಾ ದಳದ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಭೆ ಬಳಿಕ ಮಾತಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಹಲವು ಕಡೆ ಹಾನಿಯಾಗಿದೆ. ಭಾರೀ ಮಳೆಯಿಂದ ಹಲವು ಕಟ್ಟಡಗಳು, ತಡೆಗೋಡೆಗಳು, ಮನೆಗಳು ಕುಸಿದು ಬಿದ್ದಿವೆ. ಇಲ್ಲಿ ಸಿಕ್ಕಿಹಾಕಿಕೊಂಡವರ ರಕ್ಷಣಾ ಕಾರ್ಯಕ್ಕೆ ಹೋಮ್ ಗಾರ್ಡ್ ಬಳಕೆ ಮಾಡುತ್ತಿದ್ದೇವೆ. ಮಳೆ ಹಾನಿ ತಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದಕ್ಕಾಗಿ ತುರ್ತು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು