ಮಹಿಳೆ ಮೇಲೆ ಗುಂಡು ಹಾರಿಸಿ ಎಸ್ಕೇಪ್​ ಆದ ಅಪರಿಚಿತ ವ್ಯಕ್ತಿ; ಮಹಿಳೆಯ ಸ್ಥಿತಿ ಗಂಭೀರ | A unknown Person who shot at a woman and escaped; woman is serious


ಮಹಿಳೆ ಮೇಲೆ ಗುಂಡು ಹಾರಿಸಿ ಎಸ್ಕೇಪ್​ ಆದ ಅಪರಿಚಿತ ವ್ಯಕ್ತಿ; ಮಹಿಳೆಯ ಸ್ಥಿತಿ ಗಂಭೀರ

ಸಾಂದರ್ಭಿಕ ಚಿತ್ರ

ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಗುಡಿಸಲುಗಳು ಸುಟ್ಟು ಕರಕಲಾದಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಗುಡಿಸಲುಗಳಲ್ಲಿ ವಾಸವಾಗಿದ್ದ ಕುಟುಂಗಳು ಅಪಾಯದಿಂದ ಪಾರಾಗಿದ್ದಾರೆ.

ಗುಳೇದಗುಡ್ಡ: ಕಟ್ಟಡಕ್ಕೆ ನೀರು ಹೊಡೆಯುತ್ತಿದ್ದ ಮಹಿಳೆ (Woman) ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಎಸ್ಕೇಪ್​ ಆದಂತಹ ಘಟನೆ ನಗರದ ನುಗ್ಲಿ ಓಣಿಯಲ್ಲಿ ನಡೆದಿದೆ. ದ್ಯಾಮವ್ವ ಕಕ್ಕೇರಿ(45) ಗುಂಡಿನಿಂದ ಗಾಯಗೊಂಡಿರುವ ಮಹಿಳೆ. ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ಎರಡು ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, 108 ನಲ್ಲಿ ಮಹಿಳೆಯನ್ನು ಬಾಗಲಕೋಟೆಗೆ ಹೆಚ್ಚಿನ‌ ಚಿಕಿತ್ಸೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಭೇಟಿ ನಿಡದ್ದಾರೆ.

ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ:

ತುಮಕೂರು: ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಶವ ಕೆರೆಯಲ್ಲಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಬೆಂಡೋಣೆದಲ್ಲಿ ನಡೆದಿದೆ. ಮೂರ್ನಾಲ್ಕು ದಿನಗಳ ಹಿಂದೆ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆ ಮಾಡಿಕೊಂಳ್ಳಲಾಗಿದೆ ಎನ್ನಲಾಗುತ್ತಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕಸ್ಮಿಕ ಅಗ್ನಿ ಅವಘಡ; ಕರಕಲಾದ ಎಂಟು ಗುಡಿಸಲು

ಯಾದಗಿರಿ: ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಗುಡಿಸಲುಗಳು ಸುಟ್ಟು ಕರಕಲಾದಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಗುಡಿಸಲುಗಳಲ್ಲಿ ವಾಸವಾಗಿದ್ದ ಕುಟುಂಗಳು ಅಪಾಯದಿಂದ ಪಾರಾಗಿದ್ದಾರೆ. ಗುಡಿಸಲುಗಳಲ್ಲಿದ್ದ ದವಸ ಧಾನ್ಯಗಳು, ನಗದು ಹಣ ಸುಟ್ಟು ಕರಕಲಾಗಿವೆ. ಸ್ಥಳೀಯರು ಬೆಂಕಿ ನಂದಿಸುವಷ್ಟರಲ್ಲಿ ಗುಡಿಸಲುಗಳು ಸುಟ್ಟು ಹೋಗಿದ್ದು, ಕೈಲಾದಷ್ಟು ವಸ್ತುಗಳನ್ನ ಹೊರತೆಗೆದಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:

ತುಮಕೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಕೊರಟಗೆರೆ ತಾಲೂಕಿನ ಕೈಮರ ಬಳಿ ಘಟನೆ ನಡೆದಿದೆ. ತಿರುವಿನಲ್ಲಿ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ರವಿಕುಮಾರ್ 32 ಮೃತ ದುರ್ದೈವಿ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಹಲ್ಲೆ ವ್ಯಕ್ತಿ ಸಾವು

ಕುಡಿದ ಮತ್ತಿನಲ್ಲಿ ಹಣದ ವಿಚಾರಕ್ಕೆ ಮಾರಣಾಂತಿಕ ಹಲ್ಲೆ ನಡೆದಿದ್ದು ವ್ಯಕ್ತಿ ಮೃತಪಟ್ಟ ಘಟನೆ ಯಲಹಂಕ ನ್ಯೂ ಟೌನ್ ನ ಅಟ್ಟೂರು ಬಳಿ ನಡೆದಿದೆ. ರವಿಕಿರಣ್ (27) ಮೃತ ದುರ್ದೈವಿ. ಕಳೆದ ತಿಂಗಳ 25 ರಂದು ರಾತ್ರಿ ರವಿ ಕಿರಣ್ ಜೊತೆ ಕುಡಿದು ಗಲಾಟೆ ಮಾಡಿದ್ದ ಬಾಲಕೃಷ್ಣ ಇದೇ ವೇಳೆ ಕಿರಣ್ ತಲೆ ಮೇಲೆ ಇಟ್ಟಿಗೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಗಾಯಾಳುವನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. 307 ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಾಲಕೃಷ್ಣನನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ 302 ಅಡಿ ಪ್ರಕರಣ ದಾಖಲು ದಾಖಲಾಗಿದ್ದು ಬಾಲಕೃಷ್ಣ ಅಪರಾಧ ಹಿನ್ನಲೆವುಳ್ಳವನಾಗಿದ್ದು, ಆಗಾಗ ಏರಿಯಾದಲ್ಲಿ ಕುಡಿದು ಹಲ್ಲೆ ಗಲಾಟೆ ಮಾಡ್ತಿದ್ದ ಎಂದು ತಿಳಿದು ಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published. Required fields are marked *