ಬೆಳಗಾವಿ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಎಸ್.ಬಿ. ಸಿದ್ನಾಳ್ ವಿಧಿವಶರಾಗಿದ್ದಾರೆ.

85 ವರ್ಷದ ಸಿದ್ನಾಳ್ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಬೆಳಗಾವಿಯ ಮಹಾಂತೇಶ ನಗರದಲ್ಲಿನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಿದ್ನಾಳ್, ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸತತ ನಾಲ್ಕು ಬಾರಿ ಗೆದ್ದಿದ್ದರು.
ಇಂದು ಸಂಜೆ ನಾಲ್ಕು ಗಂಟೆಗೆ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದಲ್ಲಿರೋ  ಸಿದ್ನಾಳ ಕಾರ್ಖಾನೆಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ. ಸಿದ್ನಾಳ್ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

The post ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಎಸ್.ಬಿ. ಸಿದ್ನಾಳ್ ವಿಧಿವಶ appeared first on News First Kannada.

Source: News First Kannada
Read More