ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಏನಂದ್ರು..?

ಶಿವಮೊಗ್ಗ: ತಮ್ಮ ಆಪ್ತನ ಮೇಲೆ ಐಡಿ ರೇಡ್​ಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ಎಂದಿದ್ದಾರೆ.

ಐಟಿ ದಾಳಿಯ ಕುರಿತು ನಾಳೆ ಮಾಹಿತಿ ನೀಡಲಿದ್ದಾರೆ. ಅದಾದ ಬಳಿಕ ನಾನು ಉತ್ತರ ನೀಡುತ್ತೇನೆ. ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ. ಅವರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಇದೊಂದು ರಾಜಕೀಯ ಪ್ರೇರಿತ ಐಟಿ ದಾಳಿ ಅಲ್ಲ. ಸಾಮಾನ್ಯವಾಗಿ ನಡೆಯುವ ದಾಳಿ. ಉಪ ಚುನಾವಣೆ ಮೇಲೆ ಇದರಿಂದ ಯಾವುದೇ ಪರಿಣಾಮ ಆಗುವುದಿಲ್ಲ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.

News First Live Kannada

Leave a comment

Your email address will not be published. Required fields are marked *