ನವದೆಹಲಿ: ದೇಶದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ. ರಾಜ್ಯದಲ್ಲಿ ಶೇಕಡಾ 53ರಷ್ಟು ಮಕ್ಕಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಾರೆ ಎಂದು ಯೂನಿಫೈಡ್‌ ಡಿಸ್ಟ್ರಿಕ್ಟ್ ಇನ್ಫರ್ಮೇಷನ್‌ ಸಿಸ್ಟಂ ಫಾರ್‌ ಎಜುಕೇಷನ್‌ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.

ಕರ್ನಾಟಕದಲ್ಲಿ ಆಂಗ್ಲ ಶಾಲೆಗಳ ಪ್ರಮಾಣ ಶೇ. 20ರಷ್ಟು ಹೆಚ್ಚಾಗಿದ್ದರೂ ಮಾತೃಭಾಷೆಯಲ್ಲಿ ಕಲಿಯುತ್ತಿರುವವರ ಸಂಖ್ಯೆ ಹೆಚ್ಚಿದೆ ಎಂದು ಈ ವರದಿ ತಿಳಿಸಿದೆ. ಆಂಧ್ರಪ್ರದೇಶ, ತೆಲಂಗಾಣಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಅಲ್ಲಿ ತೆಲುಗು ಮಾಧ್ಯಮದಲ್ಲಿ ಕಲಿಯುತ್ತಿರುವ ಮಕ್ಕಳ ಸಂಖ್ಯೆ ಶೇ. 25ಕ್ಕಿಂತ ಕಡಿಮೆ. ಶೇ. 73.8ರಷ್ಟು ಮಕ್ಕಳು ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ ಎಂದು ತಿಳಿಸಿದೆ.

The post ಮಾತೃಭಾಷೆ ಶಿಕ್ಷಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಅಗ್ರ ಸ್ಥಾನ appeared first on News First Kannada.

Source: newsfirstlive.com

Source link