ಮಾನಸಿಕ ಖಿನ್ನತೆಗೆ ವೃದ್ಧ ಬಲಿ; ಹಣೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ

ಹಾಸನ: ಹಣೆಗೆ ಗುಂಡು ಹಾರಿಸಿಕೊಂಡ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಸವಾಸೆ ಗ್ರಾಮದಲ್ಲಿ ನಡೆದಿದೆ. ಬಸವಲಿಂಗಪ್ಪ (71) ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಸವಲಿಂಗಪ್ಪ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಬಸವಲಿಂಗಪ್ಪ ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಇನ್ನು ಮೃತನ ಪತ್ನಿ ಮತ್ತು ಪುತ್ರ ವಿದೇಶದಲ್ಲಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಚೈತನ್ಯ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

News First Live Kannada

Leave a comment

Your email address will not be published. Required fields are marked *