ಮಾನಹಾನಿ ಸುದ್ದಿ ಪ್ರಸಾರಕ್ಕೆ ನಿರ್ಬಂಧಕಾಜ್ಞೆ ವಿಚಾರ – ಕೋರ್ಟ್ ನಿಂದ ತಡೆ ತಂದ ಡಿವಿಎಸ್

– ವಿರೋಧಿಗಳ ತೇಜೋವಧೆ ತಪ್ಪಿಸಿಕೊಳ್ಳಲು ತಡೆ ಎಂದು ಸ್ಪಷ್ಟನೆ

ಬೆಂಗಳೂರು: ನಕಲಿ ಸಿಡಿ ಭೀತಿ ಹಿನ್ನೆಲೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಮಾನಹಾನಿ ಸುದ್ದಿ ಪ್ರಸಾರಕ್ಕೆ ನಿರ್ಬಂಧಕಾಜ್ಞೆ ಅಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿಂದ ಕೇಂದ್ರ ಸಚಿವರು ತಡೆಯಾಜ್ಞೆ ತಂದಿದ್ದರು. ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.

ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು ಎಂದು ಹೇಳಿದ್ದಾರೆ.

 

The post ಮಾನಹಾನಿ ಸುದ್ದಿ ಪ್ರಸಾರಕ್ಕೆ ನಿರ್ಬಂಧಕಾಜ್ಞೆ ವಿಚಾರ – ಕೋರ್ಟ್ ನಿಂದ ತಡೆ ತಂದ ಡಿವಿಎಸ್ appeared first on Public TV.

Source: publictv.in

Source link