ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ | Congress meeting on Mekedatu Padayatre Assembly Session Karnataka Politics


ಮಾರ್ಚ್ 24ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸಲು ತಯಾರಿ? ಸದನದಲ್ಲೂ ಹೋರಾಟ ನಡೆಸುವ ಬಗ್ಗೆ ಚರ್ಚೆ

ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಕೊರೊನಾ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಆರಂಭಿಸಲು ಕಾಂಗ್ರೆಸ್‌ನಲ್ಲಿ ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಮಾರ್ಚ್ 24 ರಿಂದ ಪಾದಯಾತ್ರೆ ನಡೆಸಲು ತಯಾರಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜೆಟ್ ಅಧಿವೇಶನಕ್ಕೂ ಮೊದಲೆ ಪಾದಯಾತ್ರೆಗೆ ಪ್ಲ್ಯಾನ್ ಮಾಡಲಾಗಿದೆ. ಆದರೆ ಬಜೆಟ್‌ ಬಳಿಕ ಪಾದಯಾತ್ರೆ ನಡೆಸಲು ಸಲಹೆ ಕೇಳಿಬಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಿರುವ ಬಗ್ಗೆ ಹೇಳಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಸದನ ನಡೆಯುವ ಅಷ್ಟು ದಿನ ವಿಭಿನ್ನವಾದ ಪ್ರತಿಭಟನೆ ನಡೆಸಬೇಕು. ವಿಧಾನಸೌಧಕ್ಕೆ ಪಾದಯಾತ್ರೆ, ಧರಣಿ ಕುರಿತು ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಹೋರಾತ್ರಿ ಧರಣಿ ಬಗ್ಗೆ ಸಭೆಯಲ್ಲಿ ತೀರ್ಮಾನ ಸಾಧ್ಯತೆ ಇದೆ. ಹಿಜಾಬ್ ವಿವಾದ, 40 ಪರ್ಸೆಂಟ್​​ ಕಮಿಷನ್ ಆರೋಪ, ಬಿಟ್​ಕಾಯಿನ್ ಹಗರಣ ಸೇರಿ ಕೆಲ ವಿಚಾರ ಮುಂದಿಟ್ಟು ಸದನದ ಹೊರಗೂ, ಒಳಗೂ ಹೋರಾಟ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹೋರಾಟದ ರೂಪರೇಷೆ ಸಿದ್ಧಪಡಿಸಲು ‘ಕೈ’ ನಾಯಕರ ಸಭೆ ಕರೆಯಲಾಗಿದೆ. ಮೇಕೆದಾಟು ಪಾದಯಾತ್ರೆ ಪುನಾರಂಭ ಬಗ್ಗೆಯೂ ಈ ವೇಳೆ ಚರ್ಚೆ ನಡೆಸಲಾಗಿದೆ. ದಿನಾಂಕ ನಿಗದಿ ಪಡಿಸುವ ಬಗ್ಗೆಯೂ ಸಭೆಯಲ್ಲಿ‌ ಚರ್ಚೆ ಮಾಡಲಾಗಿದೆ.

TV9 Kannada


Leave a Reply

Your email address will not be published. Required fields are marked *