ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಂತ ತಿಮ್ಮಯ್ಯ ನೇಮಕ, ಬೆಳಗಾವಿ-ಚಾಮರಾಜನಗರ ಡಿಸಿ ವರ್ಗಾವಣೆ | Shantha Thimmaiah Appointed as President of Pollution Control Board Belagavi Chamarajanagar DC Transferred


ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಂತ ತಿಮ್ಮಯ್ಯ ನೇಮಕ, ಬೆಳಗಾವಿ-ಚಾಮರಾಜನಗರ ಡಿಸಿ ವರ್ಗಾವಣೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಬೆಂಗಳೂರು: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಡಾ.ಶಾಂತ ಅವ್ವೇರಹಳ್ಳಿ ತಿಮ್ಮಯ್ಯ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಾಂತ ತಿಮ್ಮಯ್ಯ ನೇಮಕಕ್ಕೆ ತೀವ್ರ ವಿರೋಧ ಕೇಳಿ ಬಂದಿತ್ತು. ಅದರ ನಡುವೆಯೂ ಸರ್ಕಾರ ನೇಮಕ ಆದೇಶ ಅಂತಿಮಗೊಳಿಸಿದೆ.

ಜಿಲ್ಲಾಧಿಕಾರಿ ವರ್ಗಾವಣೆ
ಡಿಸೆಂಬರ್ 10ರಂದು ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆರ್.ವೆಂಕಟೇಶ್ ಕುಮಾರ್​, ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್​ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ.ಹಿರೇಮಠ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ರವಿ ಅವರಿಗೆ ಸ್ಥಳ ತೋರಿಸಿಲ್ಲ. ಸ್ಥಳ ತೋರಿಸದೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿರುವ ಜಿ.ಜಗದೀಶ್ ಅವರಿಗೆ ಬಿಎಂಆರ್​ಡಿಎ ಆಯುಕ್ತರಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆ ಅಧಿಸೂಚನೆ
ಕರ್ನಾಟಕದ ವಿಧಾನ ಪರಿಷತ್​​ನ 25 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 10ರಂದು ಮತದಾನ ನಡೆಸುವುದಾಗಿ ಘೋಷಣೆ ಮಾಡಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 26 ಕೊನೆಯ ದಿನವಾಗಿದೆ.

ಡಿಸೆಂಬರ್ 10ರ ಶುಕ್ರವಾರ ಚುನಾವಣೆ ನಡೆಯಲಿದೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಮಾಡಬಹುದಾಗಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 16ರ ವೇಳೆಗೆ ಎಲ್ಲ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಬೀದರ್ 1 , ಕಲಬುರ್ಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಮೈಸೂರು ,2, ಚಿಕ್ಕಮಗಳೂರು 1, , ಹಾಸನ1, ತುಮಕೂರು 1, ಮಂಡ್ಯ1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1 ಹಾಗೂ ಕೊಡಗು ಜಿಲ್ಲೆಯ ಒಂದು ಕ್ಷೇತ್ರಕ್ಕೆ ಡಿ. 10ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಲಾಕ್​ಡೌನ್ ಜಾರಿ; ಸುಪ್ರೀಂ ಕೋರ್ಟ್​ಗೆ ಇಂದು ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಕೆ
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ; ಐವರು ಹಾಲಿ ಎಂಎಲ್​ಸಿಗಳಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಾರ

TV9 Kannada


Leave a Reply

Your email address will not be published.