ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು 24 ಗಂಟೆಯಲ್ಲೆ ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ದೇಶಪಾಂಡೆ ನಗರದ ಅಪಾರ್ಟ್‍ಮೆಂಟ್‍ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧರ್ಮರಾಮ್ ಧರ್ಮೆಂದ್ರ ಗೋವರ್ಧನ ರಾಮ್ ಚೌಧರಿ ಎಂಬವನು ಬಂಧಿತ ಆರೋಪಿಯಾಗಿದ್ದಾನೆ.

ಹುಬ್ಬಳ್ಳಿ ದೇಶಪಾಂಡೆನಗರದ ಗುರು ಅಪಾರ್ಟ್‍ಮೆಂಟ್‍ನ ಮಹೇಶ ಎಂಬವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿ, 4,75,000 ಹಣವನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳನ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು 24 ಗಂಟೆಯಲ್ಲಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ 4 ಲಕ್ಷ 73 ಸಾವಿರ ನಗದು ವಶಕ್ಕೆ ಪಡೆದಿದ್ದು, ಹಣ ಬಚ್ಚಿಟ್ಟಿದ್ದ ಬಿಳಿ ಬಣ್ಣದ ಬ್ಯಾಗ್ ಸಮೇತ ಪತ್ತೆ ಮಾಡಿದ್ದಾರೆ.

The post ಮಾಲೀಕನ ಮನೆಯಲ್ಲೆ ಕೆಲಸಗಾರನಿಂದ ಕಳ್ಳತನ- 24 ಗಂಟೆಯಲ್ಲೆ ಆರೋಪಿ ಅಂದರ್ appeared first on Public TV.

Source: publictv.in

Source link