ಶಿರಸಿ: ಕರ್ನಾಟಕದ ವಿಧಾನ ಸಭಾಧ್ಯಕ್ಷ, ಶಿರಸಿ ಸಿದ್ದಾಪುರದ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಕೊರೊನಾ ಸೋಂಕು ದೃಢವಾಗಿದೆ.

ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಈ ಕುರಿತಂತೆ ಪತ್ರಿಕಾ ಪ್ರಕಟನೆ ಹೊರಡಿಸಿ ಮಾಹಿತಿ ನೀಡಿದ್ದಾರೆ. ಸ್ಪೀಕರ್ ಕಾಗೇರಿ ಅವರಿಗೆ ಇಂದು ಕೊರೊನಾ ಸೋಂಕು ದೃಢವಾಗಿದೆ. ಆದರೆ ಸೋಂಕಿನ ಗುಣಲಕ್ಷಣಗಳು ಕಂಡು ಬಂದಿಲ್ಲ. ಅವರು ಆರೋಗ್ಯವಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಸದ್ಯ ಅವರಿಗೆ ಸರ್ಕಾರದ ಕೊವಿಡ್ ಮಾರ್ಗಸೂಚಿ ಅನ್ವಯ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಇತ್ತೀಚಿಗೆ ಸಭಾಧ್ಯಕ್ಷರ ಸಂಪರ್ಕಕ್ಕೆ ಬಂದವರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಂದಹಾಗೇ, ಕಳೆದ 2 ದಿನಗಳ ಹಿಂದೆ ಮಾಸ್ಕ್ ಧರಿಸದೇ ಕಾಗೇರಿ ಅವರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು.

The post ಮಾಸ್ಕ್​​ ಧರಿಸದೆ ಮದುವೆಯಲ್ಲಿ ಭಾಗಿಯಾಗಿದ್ದ ಸ್ಪೀಕರ್​ ಕಾಗೇರಿ- ಇಂದು ಕೊರೊನಾ ಸೋಂಕು ದೃಢ appeared first on News First Kannada.

Source: newsfirstlive.com

Source link