ಗದಗ: ಗದಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಉತ್ಸವ ಆಚರಣೆ ಮಾಡಲಾಗಿದೆ. ಪಲ್ಲಕ್ಕಿ ಉತ್ಸವದಲ್ಲಿ ನೂರಾರು ಭಕ್ತರು ಮತ್ತು ಸ್ವಾಮೀಜಿಗಳು ಯಾವುದೇ ಸಾಮಾಜಿಕ ಅಂತರ ಹಾಗೂ ಕೊರೊನಾ ನಿಯಮಗಳನ್ನು ಪಾಲನೆ ಮಾಡದೆ ಭಾಗಿಯಾಗಿದ್ದರು.

ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ಪಲ್ಲಕ್ಕಿ ಉತ್ಸವ ನಡೆಸಲಾಗಿದೆ. ಶಿಷ್ಯರ ವಿರೋಧವಿದ್ದರೂ ಪಲ್ಲಕ್ಕಿ ಉತ್ಸವ ಆಚರಣೆ ಮಾಡಲಾಗಿದೆ. ಜಾತ್ರೆ ರದ್ದಾಗಿದೆ ಅಂತ ಹೇಳಿ ಪಲ್ಲಕ್ಕಿ ಉತ್ಸವ ನಡೆಸಿದ್ದಾರೆ ಅಂತ ಹೇಳಲಾಗ್ತಿದೆ. ಈ ಹಿಂದೆ ನ್ಯೂಸ್​ಫಸ್ಟ್​​ನೊಂದಿಗೆ ಮಾತನಾಡಿದ್ದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರು, ಜಾತ್ರೆ ರದ್ದು ಮಾಡಲಾಗಿದೆ ಎಂದು ಭಕ್ತರಿಗೆ ಸಂದೇಶ ತಲುಪಿಸಿದ್ದರು.

The post ಮಾಸ್ಕ್ ಇಲ್ಲ ಅಂತರವೂ ಇಲ್ಲ; ಕೊರೊನಾ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಉತ್ಸವ appeared first on News First Kannada.

Source: newsfirstlive.com

Source link