ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರದ ಗಡಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರದಿಂದ ಮಂಗಳವಾರದ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಮಾಡುವುದಾಗಿ ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಲಾಕ್‍ಡೌನ್ ಅವಧಿಯಲ್ಲಿ ಆಸ್ಪತ್ರೆ, ಮೆಡಿಕಲ್ ಶಾಪ್, ಪೆಟ್ರೋಲ್ ಬಂಕ್ ಹೊರತುಪಡಿಸಿ ಇತರೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುವುದಿಲ್ಲ. ಮಾರನೇ ದಿನ ಅಂದ್ರೆ, ಬುಧವಾರದಿಂದ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಜಿಲ್ಲೆಯ ನಾಗರೀಕರು ಸಹಕರಿಸುವಂತೆ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.

The post ಮಿತಿ ಮೀರಿದ ಸೋಂಕು- ರಾಯಚೂರಿನಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಿದ ಡಿಸಿ appeared first on News First Kannada.

Source: newsfirstlive.com

Source link