– ಸುಮಲತಾ, ಅಭಿಷೇಕ್ ಹೇಳಿದ್ದೇನು..?

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ 69ನೇ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್, ರಮೇಶ್ ಅರವಿಂದ್, ದರ್ಶನ್ ಸೇರಿದಂತೆ ಇತರೆ ಸ್ಯಾಂಡಲ್‍ವುಡ್ ಮಂದಿ ಶುಭ ಕೋರಿದ್ದಾರೆ. ಅಂಬಿ ಅವರನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತದ್ದೇವೆ ಎಂಬುದನ್ನು ಸೋಶಿಯಲ್ ಮೀಡಿಯಾದಲ್ಲಿ ವಿಶೇಷವಾಗಿ ನೆನಪಿಸಿಕೊಂಡಿದ್ದಾರೆ.

ನಿಜಕ್ಕೂ ಮಿಸ್ ಯೂ ಮಾಮ ಎಂದು ಬರೆದುಕೊಂಡು ಅಂಬರೀಶ್ ಅವರ ಕೆಲವು ಫೊಟೋಗಳನ್ನು ಟ್ವೀಟ್ ಮಾಡುವಮೂಲಕವಾಗಿ ತಾವು ಎಷ್ಟು ಅಂಬಿ ಅವರುನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎನ್ನುವುದನ್ನು ಕೆಲವು ಪದಗಳ ಮೂಲಕವಾಗಿ ಸುದೀಪ್ ಹೇಳಿದ್ದಾರೆ.

ಅಜರಾಮರ ನೆನಪುಗಳು, ಚಿರಂತನ ಚೈತನ್ಯ, ಅಪಾರ ಅಕ್ಕರೆ, ಸಂಜೀವಿನಿ ಸ್ನೇಹ, ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸಿ ಹೃದಯವಂತಿಕೆ ಶಾಶ್ವತ ನಲ್ಮೆ, ಧನ್ಯ ಬದುಕು ಎಂದು ಸುಮಲತಾ ಅಂಬರೀಶ್ ಟ್ವೀಟ್ ಮೂಲಕ ಪತಿಯನ್ನು ಸ್ಮರಿಸಿದ್ದಾರೆ. ಅಪ್ಪನ ಹುಟ್ಟುಹಬ್ಬಕ್ಕೆ ಇನ್‍ಸ್ಟಾಗ್ರಾಮ್‍ನಲ್ಲಿ ಶುಭಕೋರಿರುವ ಅಭಿಷೇಕ್, ಹ್ಯಾಪಿ ಬರ್ತ್ ಡೇ ಲೆಜೆಂಡ್ ಎಂದು ಅಪ್ಪನ ಜೊತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದಾರೆ.

ಅಂಬರೀಶಣ್ಣ ಅಮರ, ಅಜರಾಮರ ಎಂದು ನಿರ್ದೇಶಕ ಪವನ್ ಒಡೆಯರ್ ಶುಭಕೋರಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಸಹ ಅಂಬಿಗೆ ವಿಶ್ ಮಾಡಿದ್ದು, ಇಂದು “ರೆಬೆಲ್ ಸ್ಟಾರ್” ಅಂಬರೀಷ್ ರವರ ಜನ್ಮ ದಿನ… ಅವರ ನಟನೆ..ಕೆಲಸ.,ಮಾತು ..ನೆನಪು ಎಂದಿಗು ಮರೆಯೋಕೆ ಚಾನ್ಸೆ ಇಲ್ಲ… ಓo ತಿಚಿಥಿ ಎಂದಿದ್ದಾರೆ. ಇದನ್ನೂ ಓದಿ: ಅಪ್ಪಾಜಿಯ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿ: ದರ್ಶನ್

ಅಂಬರೀಶ್ ಜೊತೆ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದಾರೆ. ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು. ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ, ಅಂಬರೀಶ್ ಬುಲ್‍ಬುಲ್ ಮುಂತಾದ ಸಿನಿಮಾಗಳಲ್ಲಿ ದರ್ಶನ್ ಮತ್ತು ಅಂಬರೀಶ್ ಜೊತೆಯಾಗಿ ನಟಿಸಿದ್ದರು.

ಅಂಬರೀಶ್ ಜನ್ಮದಿನದ ಪ್ರಯುಕ್ತ ಇಂದು ಸಂಸದೆ ಸುಮಲತಾ ಅಂಬರೀಶ್ ಅವರು ಹಲವು ಕೆಲಸಗಳನ್ನು ಮಾಡುತ್ತಿದ್ದಾರೆ. ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಶ್ ಸಮಾಧಿಗೆ ಅವರು ಕುಟುಂಬಸ್ಥರ ಜೊತೆ ಪೂಜೆ ಸಲ್ಲಿಸಿದ್ದಾರೆ. ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಸರ್ಕಾರ ಕೊವಿರೊನಾ ಇರುವುದರಿಂದ ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಹೇಳಿದ್ದಾರೆ. ಇದನ್ನೂ ಓದಿ: ಇಂದು ಅಂಬರೀಶ್ ಜನ್ಮದಿನ, ಯಾವುದೇ ಸಂಭ್ರಮಾಚರಣೆ ಬೇಡ: ಸುಮಲತಾ

ನಮ್ಮೆಲ್ಲರ ಪ್ರೀತಿಯ ಅಂಬರೀಶ್ ಅವರ 69ನೇ ಜನ್ಮ ಜಯಂತಿ ಸಂಭ್ರಮದಿಂದ ಆಚರಿಸಲು ನೀವೆಲ್ಲರೂ ಕಾಯುತ್ತಿರುತ್ತೀರಿ. ಆದರೆ ಕೊರೊನಾ ತಡೆಯಲು ದೇಶವೆಲ್ಲ ಶ್ರಮಿಸುತ್ತಿರುವಾಗ ನಾವು ಯಾವುದೇ ಸಾರ್ವಜನಿಕ ಆಚರಣೆ ಅಥವಾ ಸಮಾರಂಭ ಮಾಡುವುದು ಬೇಡವೆಂದು ನನ್ನ ವಿನಮ್ರ ಮನವಿ. ಈ ವರ್ಷ ಅವರನ್ನು ನಮ್ಮ ಮನೆ-ಮನಗಳಲ್ಲೇ ಆಚರಿಸೋಣ ಎಂದು ಸುಮಲತಾ ಮೊದಲೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗಳಲ್ಲಿ ಮನವಿಮಾಡಿದ್ದರು.

The post ಮಿಸ್ ಮಾಡಿಕೊಳ್ಳುತ್ತಿದ್ದೇವೆ ಅಂಬಿ ಮಾಮ: ಸುದೀಪ್ appeared first on Public TV.

Source: publictv.in

Source link