ಹಾಸನ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದ್ದಂತೆ, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ರಾಜ್ಯದ ಅಭಿವೃದ್ಧಿಗೆ ಗಮನ ಕೊಡುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದಿದ್ದಾರೆ. ಎಲ್ಲರ ಸಹಕಾರದಿಂದ ರಾಜ್ಯದ ಮುಂದಿನ ಅಭಿವೃದ್ಧಿಯತ್ತ ಗಮನ ಕೊಡುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಯಡಿಯೂರಪ್ಪನವರದು ಬಗ್ಗುವ ತಂತ್ರ ಅಲ್ಲ – ಡಿಕೆಶಿ

ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್‍ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ನನ್ನ ಮೇಲೆ ಪ್ರಧಾನಿ ಮೋದಿ, ಅಮಿತ್ ಶಾ ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಎಳೆದರು.

The post ಮುಂದಿನ ಎರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ appeared first on Public TV.

Source: publictv.in

Source link

Leave a comment