ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ ನಾರಾಯಣಗೌಡ
ಮೈಸೂರು: ಮುಂದಿನ ವಾರದಿಂದ ವೀಕೆಂಡ್ ಕರ್ಫ್ಯೂ (Weekend curfew) ಬೇಡ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿ ಮಾಡುತ್ತೇವೆ. ಮೂರನೇ ಅಲೆಯ ಕೊವಿಡ್ ಅಷ್ಟೋಂದು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ವೀಕೆಂಡ್ ಕರ್ಫ್ಯೂ ಜತೆಗೆ ನೈಟ್ ಕರ್ಫ್ಯೂ ಅವಧಿಯನ್ನು ಕಡಿಮೆ ಮಾಡಬೇಕು. ಮೈಸೂರು ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ (Tourists) ವೀಕೆಂಡ್ ಕರ್ಫ್ಯೂನಿಂದ ತೊಂದರೆಯಾಗುತ್ತದೆ. ನಾವು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತೇವೆ ಎಂದು ಟಿವಿ9ಗೆ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.
ಈ ವಾರವೇ ವೀಕೆಂಡ್ ಕರ್ಫ್ಯೂಗೆ ವಿರೋಧವಿತ್ತು. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಸಹಕರಿಸಿದ್ದೇವೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದ್ದಾರೆ.