ಮುಂಬೈ: ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ತಡರಾತ್ರಿ ಕಟ್ಟಡ ಕುಸಿದು ಬಿದ್ದಿದ್ದು, ಭಾರೀ ಅನಾಹುತ ಸಂಭವಿಸಿದೆ. ನಗರದ ಪಶ್ಚಿಮ ಮಲಾಡ್ ಏರಿಯಾದಲ್ಲಿ ಮನೆ ಹಠಾತ್ತನೇ ಕುಸಿದು ಬಿದ್ದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕಟ್ಟಡದಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ. ದುರಾದೃಷ್ಟವಶಾತ್ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬೃಹತ್ ಕಟ್ಟಡ ಕುಸಿದು ಬೀಳುತ್ತಿದ್ದಂತೆ ಮುನ್ನಚ್ಚರಿಕೆ ದೃಷ್ಠಿಯಿಂದ ಹತ್ತಿರದ 3 ಬಿಲ್ಡಿಂಗ್​ಗಳಲ್ಲಿದ್ದ ಜನರನ್ನು ಸಹ  ಪೊಲೀಸರು ಸ್ಥಳಾಂತರ ಮಾಡಿದ್ದಾರೆ.

The post ಮುಂಬೈನಲ್ಲಿ ಕಟ್ಟಡ ಕುಸಿದು 11 ಮಂದಿ ದುರ್ಮರಣ appeared first on News First Kannada.

Source: newsfirstlive.com

Source link