ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ | NCB Arrested man from Gujarat in connection with the seizure of 700 grams of heroin At Mumbai


ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ

ಬಂಧಿತ ಆರೋಪಿ ಕೃಷ್ಣ ಮುರಾರಿ ಪ್ರಸಾದ್

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಬಳಿಯ ಕಾರ್ಗೋ ಕಾಂಪ್ಲೆಕ್ಸ್‌ನಿಂದ ₹ 4 ಕೋಟಿ ಮೌಲ್ಯದ 700 ಗ್ರಾಂ ಹೆರಾಯಿನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಗುರುವಾರ ಗುಜರಾತ್‌ನ ವ್ಯಕ್ತಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಲಯ ಘಟಕವು ಮುಂಬೈನ ಉಪನಗರದಲ್ಲಿರುವ ಇಂಟರ್ನ್ಯಾಷನಲ್ ಕೊರಿಯರ್ ಟರ್ಮಿನಲ್‌ನಲ್ಲಿ ಪಾರ್ಸೆಲ್‌ನಲ್ಲಿ ಡ್ರಗ್ಸ್ ಕಳ್ಳಸಾಗಣೆ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ಅವರು ಹೇಳಿದರು.

ಸೋಮವಾರ ಕಾಂಪ್ಲೆಕ್ಸ್‌ನಲ್ಲಿರುವ ಕಾನ್ಫರೆನ್ಸ್ ಹಾಲ್‌ನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ಯಾಕೆಟ್‌ನಲ್ಲಿ 700 ಗ್ರಾಂ ಬಿಳಿ ಪುಡಿ ಪತ್ತೆಯಾಗಿದ್ದು. ಕಾಳದಂಧೆ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹ 4 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ನಾರ್ಕೋಟಿಕ್ ಡ್ರಗ್ಸ್ ಆ್ಯಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪಾರ್ಸೆಲ್ ಸಾಗಿಸಿದ ವಡೋದರಾ ನಿವಾಸಿ ಕೃಷ್ಣ ಮುರಾರಿ ಪ್ರಸಾದ್ ಅವರನ್ನು ಗುರುವಾರ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಚೇರಿಯಲ್ಲಿ ಹೇಳಿಕೆ ದಾಖಲಿಸಲು ಕರೆಸಲಾಗಿದೆ ಎಂದು ಅವರು ಹೇಳಿದರು. ವಿಚಾರಣೆಯ ನಂತರ ಪ್ರಸಾದ್ ಅವರನ್ನು ಬಂಧಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: Modi in Kedarnath ಕೇದಾರನಾಥದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಮಾಡಿದ ನರೇಂದ್ರ ಮೋದಿ

TV9 Kannada


Leave a Reply

Your email address will not be published. Required fields are marked *