ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಹತ್ಯೆ; ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ದುಷ್ಕರ್ಮಿಗಳು | Miscreants killed mulbagal Municipal Council Member Jagan Mohan in kolar


ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಹತ್ಯೆ; ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ದುಷ್ಕರ್ಮಿಗಳು

ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ಮೇಲೆ ದಾಳಿ ನಡೆಸಿ ಕೊಲೆ ಮಾಡಲಾಗಿದೆ.

TV9kannada Web Team

| Edited By: Ayesha Banu

Jun 07, 2022 | 7:32 AM
ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ಹತ್ಯೆ ನಡೆದಿದೆ. ಇಂದು ಬೆಳಿಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತ ಗುಂಪೊಂದು ಜಗನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಜಗನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗ ಮೋಹನ್ ಮೇಲೆ ನಡೆದ ದಾಳಿಯಿಂದ ಕೋಲಾರ ಬೆಚ್ಚಿಬಿದ್ದಿದೆ. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published.