ಮೂಲಸೌಕರ್ಯ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ಅಮೂಲಾಗ್ರ ಬದಲಾವಣೆಯಾಗುತ್ತಿದೆ: ಪ್ರಧಾನಿ ಮೋದಿ | India has witnessed unprecedented transformation in the field of infrastructure in last 8 years: Narendra Modi, Prime Ministerಆಯುಷ್ಮಾನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ, ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ, ಎಂದು ಪ್ರಧಾನಿ ಮೋದಿ ಹೇಳಿದರು.

TV9kannada Web Team


| Edited By: Arun Belly

Sep 02, 2022 | 4:22 PM
ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಅಯೋಜನೆಗೊಂಡ ಸಮಾವೇಶ ಕಾರ್ಯಕ್ರಮದಲ್ಲಿ ಮಾತಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ನೌಕಾ ಕ್ಷೇತ್ರದಲ್ಲಿ ಭಾರತಕ್ಕೆ ಇಂದು ಮಹತ್ವದ ದಿನ, ಹಲವಾರು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ್ದೇವೆ ಎಂದು ಹೇಳಿದರು. ಮೂಲ ಸೌಕರ್ಯ (infrastructure) ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ಅಮೂಲಾಗ್ರ ಬದಲಾವಣೆಯಾಗುತ್ತಿದೆ ಎಂದ ಪ್ರಧಾನಿಗಳು ಸಾಗರ್ ಮಾಲಾ (Sagar Mala) ಯೋಜನೆಯಿಂದ ಮತ್ತಷ್ಟು ಶಕ್ತಿ ಲಭ್ಯವಾಗಲಿದೆ ಎಂದರು. ಸಾಗರ್ ಮಾಲಾ ಯೋಜನೆಯ ಫಲಾನುಭವಿಗಳಾಗಿರುವ ಹಲವು ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಂದಾಗಿದ್ದು ಡಬಲ್ ಇಂಜಿನ್ ಸರ್ಕಾರ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು. ಆಯುಷ್ಮಾನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ, ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ, ಎಂದು ಪ್ರಧಾನಿ ಮೋದಿ ಹೇಳಿದರು.

TV9 Kannada


Leave a Reply

Your email address will not be published.