ಮೇಕೆದಾಟು ಅಣೆಕಟ್ಟು ಯೋಜನೆ: ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಕೊಟ್ಟ NGT

ಮೇಕೆದಾಟು ಅಣೆಕಟ್ಟು ಯೋಜನೆ: ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಕೊಟ್ಟ NGT

ಬೆಂಗಳೂರು: ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರದಲ್ಲಿ ಸದ್ಯ ಹಸಿರು ನ್ಯಾಯ ಮಂಡಳಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕ ವಿರುದ್ಧದ ಪ್ರಕರಣವನ್ನ ಎನ್​ಜಿಟಿ((National Green Tribunal) ಮುಕ್ತಾಯಗೊಳಿಸಿದೆ.

ಪತ್ರಿಕಾ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು.. ಅನುಮತಿ ಇಲ್ಲದೇ ಕಾಮಗಾರಿ ಸಿದ್ಧತೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಸ್ಥಳ ಪರಿಶೀಲನೆಗೆ ಜಂಟಿ ಸಮಿತಿ ರಚಿಸಲಾಗಿತ್ತು. ಅಲ್ಲದೇ ಜಂಟಿ ಸಮಿತಿಗೆ ಜುಲೈ 5 ರೊಳಗೆ ವರದಿ ನೀಡಲು ಕೆ. ರಾಮಕೃಷ್ಣನ್‌ ಹಾಗೂ ತಜ್ಞ ಸದಸ್ಯ ಕೆ. ಸತ್ಯಗೋಪಾಲ್‌ ಅವರಿದ್ದ ಪೀಠ ಸೂಚಿಸಿತ್ತು.

ಕೇಂದ್ರ ಪರಿಸರ ಸಚಿವಾಲಯ, ಜಲಸಂಪನ್ಮೂಲ ಸಚಿವಾಲಯ, ಕೇಂದ್ರೀಯ ಜಲ ಆಯೋಗ, ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳಿಗೆ ಈ ಸಂಬಂಧ ನೊಟೀಸ್ ಕೂಡ ನೀಡಿ.. ಈ ಆರೋಪದ ಬಗ್ಗೆ ಸ್ಪಷ್ಟನೆ ನೀಡಲು ಸೂಚಿಸಿತ್ತು. ಈ ಎನ್​ಜಿಟಿ ಆದೇಶ ಮರುಪರಿಶೀಲನೆ ಕೋರಿ ಕರ್ನಾಟಕ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.. ಸದ್ಯ ಅರ್ಜಿಯ ವಿಚಾರಣೆ ನಡೆಸಿದ ಎನ್​ಜಿಟಿ ರಾಜ್ಯ ಸರ್ಕಾರಕ್ಕೆ ರಿಲೀಫ್ ನೀಡಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ; ವಾಸ್ತವದ ವರದಿಗೆ ಸಮಿತಿ ರಚಿಸಿದ ಎನ್​ಜಿಟಿ

ಕರ್ನಾಟಕದ ವಾದ:
ಮೇಕೆದಾಟು ಯೋಜನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದೆ.. ಸದ್ಯ ಪರಿಸರ ಅನುಮೋದನೆ ಪ್ರಕ್ರಿಯೆ ಬಾಕಿಯಿದೆ. ಮೇಕೆದಾಟು ಯೋಜನೆ ಪ್ರಶ್ನಿಸಿ ಈಗಾಗಲೇ ಅರ್ಜಿ ಸಲ್ಲಿಕೆಯಾಗಿದೆ. ತಮಿಳುನಾಡು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಈ ಮಧ್ಯೆ ಚೆನ್ನೈ ಎನ್ ಜಿಟಿಯಿಂದ ಸಮಿತಿ ರಚನೆ ಸರಿಯಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದಿಸಿದ್ದರು. ವಾದ ಮನ್ನಿಸಿ ಕೇಸ್​ನ್ನ ಎನ್​​ಜಿಟಿ  ಮುಕ್ತಾಯಗೊಳಿಸಿದೆ.

ಈಗ ಆಗಿರುವ ವಿವಾದದ ಹಿನ್ನಲೆ:
ಮೇಕೆದಾಟು ಯೋಜನೆ 9 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆಯಾಗಿದೆ. ಇದರಿಂದ 4.75 ಟಿಎಂಸಿ ನೀರು ಬಳಕೆ ಉದ್ದೇಶ ಹೊಂದಲಾಗಿದೆ. ಈ ಯೋಜನೆ ರಾಮನಗರ ಹಾಗೂ ಚಾಮರಾಜನಗರ ಜಿಲ್ಲಾ ಗಡಿ ಭಾಗಕ್ಕೆ ಬರುತ್ತೆ. ಇದರಿಂದ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿವ ನೀರು ಪೂರೈಸುವ ಯೋಜನೆ ಹೊಂದಲಾಗಿದ್ದು ಜೊತೆಗೆ 400 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಉದ್ದೇಶವನ್ನೂ ಹೊಂದಿದೆ. ಆದರೆ ತಮಿಳುನಾಡು ಯೋಜನೆಗೆ ಆಕ್ಷೇಪ ಎತ್ತಿ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

The post ಮೇಕೆದಾಟು ಅಣೆಕಟ್ಟು ಯೋಜನೆ: ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಕೊಟ್ಟ NGT appeared first on News First Kannada.

Source: newsfirstlive.com

Source link