ಬೆಂಗಳೂರು: ಕೊರೊನಾದ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೊರೊನಾವನ್ನು ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ.

ಇದೀಗ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಸಾಮಗ್ರಿ ಪಡೆಯಲು ಬೆರಳಚ್ಚು ಕಡ್ಡಾಯ ನಿಯಮವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ರಾಜ್ಯದಲ್ಲಿ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿಯವರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಮೇ ತಿಂಗಳ ಪಡಿತರವನ್ನು ಚೀಟಿದಾರರ ಬಯೋಮೆಟ್ರಿಕ್ ಅಥೆಂಟಿಕೇಷನ್ ಇಲ್ಲದೆ ವಿತರಿಸಲು ಸರ್ಕಾರ ತಿಳಿಸಿದೆ.

The post ಮೇನಲ್ಲಿ ಬಯೋಮೆಟ್ರಿಕ್ ದೃಢೀಕರಣವಿಲ್ಲದೆ ಪಡಿತರ ವಿತರಣೆಗೆ ಸರ್ಕಾರ ಆದೇಶ appeared first on News First Kannada.

Source: newsfirstlive.com

Source link