ಬೆಂಗಳೂರು: ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ಸೆಮಿ ಲಾಕ್‍ಡೌನ್ ಜಾರಿ ಮಾಡಿದ್ದರೂ ಕೂಡ ಸಂಚಾರ ನಿಯಂತ್ರಣಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಆದೇಶ ನೀಡಿದ್ದಾರೆ.

ಸೆಮಿ ಲಾಕ್‍ಡೌನ್ ಜಾರಿಯಾಗಿದ್ದರು ಕೂಡ ಕೊರೊನಾ ಪ್ರಕರಣಗಳು ಹಾಗೂ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ. ಈ ಹಿನ್ನೆಯಲ್ಲಿ ಜನರು ಗುಂಪು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 24 ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಇರಲಿದೆ. ಆದರೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಏರ್ ಪೋರ್ಟ್, ಮೆಟ್ರೋ ನಿಲ್ದಾಣಕ್ಕೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಉಳಿದಂತೆ ನಿಯಮಗಳನ್ನು ಉಲ್ಲಂಘಟನೆ ಮಾಡಿದರೆ ಅಂತವರ ವಿರುದ್ಧ ಎನ್‍ಡಿಎಂಎ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

The post ಮೇ 24ರವರೆಗೂ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ- ಕಮಲ್ ಪಂತ್ ಆದೇಶ appeared first on News First Kannada.

Source: newsfirstlive.com

Source link