ಬೆಂಗಳೂರು: ರಾಜ್ಯದಲ್ಲಿ ಮೇ 24 ರತನಕ ಇರುವ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ ಎಂದು ಸರ್ಕಾರದ ಮೂಲಗಳು ಹೇಳಿವೆ.

ಸರ್ಕಾರದ ಮಟ್ಟದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಚರ್ಚೆ ನಡೆದಿದ್ದು.. ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿದ್ರೆ ಒಳ್ಳೆಯದು ಎಂಬ ಅಭಿಪ್ರಾಯಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.

ಸರ್ಕಾರದ ನಿಲುವಿನ ಬಗ್ಗೆ ನ್ಯೂಸ್ ಫಸ್ಟ್ ಗೆ ಮಾಹಿತಿ ಲಭ್ಯವಾಗಿದ್ದು.. ಲಾಕ್ ಡೌನ್ ವಿಸ್ತರಣೆ ಮಾಡಿದರೆ ಆರ್ಥಿಕ ಪ್ಯಾಕೇಜ್ ನೀಡುವ ಬಗ್ಗೆಯೂ ಚಿಂತನೆ ನಡೆದಿದೆಯಂತೆ.. ಈ ವಾರದ ಅಂತ್ಯದಲ್ಲಿ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆಯಲಿದ್ದಾರೆ. ಲಾಕ್ ಡೌನ್ ವಿಸ್ತರಣೆಗೆ ಸಚಿವರಿಂದಲೂ ಕೂಡ ಒಲವು ವ್ಯಕ್ತವಾದ ಹಿನ್ನೆಲೆ ಈ ವಾರದ ಅಂತ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

The post ಮೇ 24ರ ಬಳಿಕ ರಾಜ್ಯದಲ್ಲಿ ಮತ್ತೊಂದು ವಾರ ಲಾಕ್​ಡೌನ್​ ವಿಸ್ತರಣೆ ಪಕ್ಕಾ appeared first on News First Kannada.

Source: newsfirstlive.com

Source link