
ರಾಜನಾಥ್ ಸಿಂಗ್
ಮೇ 26 ಮತ್ತು ಮೇ 27ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಲಿದ್ದು, ಜಲಾಂತರ್ಗಾಮಿ ಸಮುದ್ರಯಾನದಲ್ಲಿ ಭಾಗಿಯಾಗಲಿದ್ದಾರೆ.
ಕಾರವಾರ: ಕರ್ನಾಟಕ (Karnataka)ಕ್ಕೆ ಬಿಜೆಪಿಯ ದಿಗ್ಗಜರುಗಳು ಆಗಮಿಸುತ್ತಿದ್ದು, ಮೇ ತಿಂಗಳಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಆಗಮಿಸಿದರೆ ಜೂನ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಮಿಸುತ್ತಿದ್ದಾರೆ. ಮೇ. 26ರಂದು ರಾಜ್ಯಕ್ಕೆ ರಾಜನಾಥ್ ಸಿಂಗ್ ಅವರು ಆಗಮಿಸಲಿದ್ದು, ಎರಡು ದಿನ ಜಲಾಂತರ್ಗಾಮಿ ಸಮುದ್ರಯಾನ (Navigation)ದಲ್ಲಿ ಭಾಗಿಯಾಗಲಿದ್ದಾರೆ.
ರಕ್ಷಣಾ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನೌಕಾನೆಲೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಆಗಮಿಸಿದ ದಿನ (ಮೇ 26)ದಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾನೆಲೆಗೆ ಭೇಟಿ ನೀಡಲಿದ್ದಾರೆ. ಕಾರವಾರದ ಅರಗಾ ಬಳಿ ಕದಂಬ ನೌಕಾನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಐಎನ್ಎಸ್ ವಿಕ್ರಮಾದಿತ್ಯ ನೌಕಾಯಾನದಲ್ಲಿ ಭಾಗಿಯಾಗಲಿರುವ ರಕ್ಷಣಾ ಸಚಿವರು, ಮೇ 27ರಂದು ಮಧ್ಯಾಹ್ನ 2 ಗಂಟೆಗೆ ನೌಕಾನೆಲೆಗೆ ವಾಪಸ್ ಆಗಲಿದ್ದಾರೆ.